ಜಮ್ಮು-ಕಾಶ್ಮೀರದ ನಕಲಿ ನಿವಾಸಿಗಳನ್ನು ಗುರುತಿಸಿ ಹೊರಹಾಕಿ: ನ್ಯಾಷನಲ್ ಕಾನ್ಫರೆನ್ಸ್
ಜಮ್ಮು-ಕಾಶ್ಮೀರದಲ್ಲಿನ ನಕಲಿ ನಿವಾಸಿಗಳನ್ನು ಗುರುತಿಸಿ ಹೊರಹಾಕುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ಆಗ್ರಹಿಸಿದೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿನ ನಕಲಿ ನಿವಾಸಿಗಳನ್ನು ಗುರುತಿಸಿ ಹೊರಹಾಕುವುದಕ್ಕೆ ನ್ಯಾಷನಲ್ ಕಾನ್ಫರೆನ್ಸ್ ಆಗ್ರಹಿಸಿದೆ.
ಜಮ್ಮು-ಕಾಶ್ಮೀರದ ಸ್ಥಳೀಯ ನಿವಾಸಿಗಳಿಗೆ ನಿರ್ದಿಷ್ಟ ವಿಶೇಷ ಸವಲತ್ತುಗಳನ್ನು ನೀಡುವ ಆರ್ಟಿಕಲ್ 35ಎ ನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಯುತ್ತಿರುವ ಸಂದರ್ಭದಲ್ಲೇ ನ್ಯಾಷನಲ್ ಕಾನ್ಫರೆನ್ಸ್ ನ ಪ್ರಾಂತೀಯ ಅಧ್ಯಕ್ಷ ದೇವೇಂದರ್ ಸಿಂಗ್ ರಾಣ ಈ ವಿಷಯ ಪ್ರಸ್ತಾಪಿಸಿದ್ದಾರೆ.
ಬಿಜೆಪಿ-ಪಿಡಿಪಿ ಸರ್ಕಾರದ ವಿರುದ್ಧ ಮಾತನಾಡಿರುವ ರಾಣ, ಬಿಜೆಪಿ-ಪಿಡಿಪಿ ಸರ್ಕಾರ ಕಾಶ್ಮೀರ ಮೂಲ ನಿವಾಸಿಗಳ ಹಕ್ಕು, ಗೌರವ, ಅಸ್ಥಿತ್ವವನ್ನು ಕಡೆಗಣಿಸುತ್ತಿದೆ ಎಂದು ಎಂದು ಆರೋಪಿಸಿದ್ದಾರೆ. ಸ್ಥಳೀಯರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ನಕಲಿ ನಿವಾಸಿಗಳನ್ನು ಗುರುತಿಸಿ ಹೊರಹಾಕಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


