ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ಆರ್ಟಿಕಲ್ 35ಎ ಕುರಿತ ವಿಚಾರಣೆ ಜನವರಿ 2019ಕ್ಕೆ ಮುಂದೂಡಿಕೆ
ಜಮ್ಮು ಮತ್ತು ಕಾಶ್ಮೀರ ವಿಶೇಷ ಸವಲತ್ತುಗಳು ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಸಂವಿಧಾನದ 35ಎ ವಿಭಾಗದ ಸಿಂಧುತ್ವವನ್ನು ಕುರಿತ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಶೇಷ ಸವಲತ್ತುಗಳು ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಸಂವಿಧಾನದ 35ಎ ವಿಭಾಗದ ಸಿಂಧುತ್ವವನ್ನು ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಜನವರಿ 2019 ರವರೆಗೆ ಮುಂದೂಡಿದೆ.
ವರದಿ ಪ್ರಕಾರ ಸುಪ್ರೀಂ ಕೋರ್ಟ್ ಮುಂದಿನ ವರ್ಷ ಜನವರಿ 19 ರಂದು ಈ ಸಂಬಂಧ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಈ ವರ್ಷಾಂತ್ಯಕ್ಕೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ಪಂಚಾಯತ್ ಚುನಾವಣೆ ನಡೆಯುವ ಕಾರಣ 35ಎ ವಿಚಾರಣೆಯನ್ನು ಮುಂದೂಡಬೇಕೆಂದು ಕೇಂದ್ರ ಹಾಗೂ ಜಮ್ಮು ಕಾಶ್ಮೀರ ರಾಜ್ಯ ಸರ್ಕಾರಗಳೆರಡೂ ಮನವಿ ಮಾಡಿದ್ದವು.
ವಕೀಲ ಡಿ.ಕೆ.ದುಬೆ ಈ ಸಂಬಂಧ ಮಾಹಿತಿ ನೀಡಿ "ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮನವಿಯಂತೆ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿದೆ" ಎಂದಿದ್ದಾರೆ.
ವಕೀಲ ವರುಣ್ ಕುಮಾರ್ ಸಹ ಈ ಸಂಬಂಧ ಮಾತನಾಡಿದ್ದು ಉನ್ನತ ನ್ಯಾಯಾಲಯ ಕಾಶ್ಮೀರ ವಿಶೇಷ ಸ್ಥಾನಮಾನ ಕುರಿತ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಮುಂದಿನ ಜನವರಿಗೆ ಮುಂದೂಡಿದೆ ಎಂದು ತಿಳಿಸಿದರು.
ಆಗಸ್ಟ್ 27ರಂದು ಸುಪ್ರೀಂ ಕೋರ್ಟ್ ನಲ್ಲಿ ಈ ಸಂವ್ಬಂಧ ವಿಚಾರಣೆ ನಡೆದಿದ್ದು ಆ ವೇಳೆ ಸಂವಿಧಾನದ 35ಎ ವಿಭಾಗ ರದ್ದಾಗಿದೆ ಎಂದು ಗಾಳಿಸುದ್ದಿ ಸಹ ಹಬ್ಬಿತ್ತು. ಇದರಿಂದಾಗಿ ಕಾಶ್ಮೀರದ ಕೆಲ ಪ್ರದೇಶಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


