ಸರ್ಕಾರಿ ಜಾಹೀರಾತು ಪ್ರಕಟಣೆ ಮಾರ್ಗದರ್ಶನ ಉಲ್ಲಂಘನೆ, ಕೇಂದ್ರ ಸರ್ಕಾರ ಸೇರಿ 6 ರಾಜ್ಯಗಳಿಗೆ ಸುಪ್ರೀಂ ನೋಟಿಸ್
ಸರ್ಕಾರಿ ಜಾಹೀರಾತು ಪ್ರಕಟಣೆ ಕುರಿತು ನೀಡಿದ್ದ ಮಾರ್ಗದರ್ಶನವನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವೂ ಸೇರಿದಂತೆ 6 ರಾಜ್ಯ ಸರ್ಕಾರಗಳು ಮತ್ತು ಬಿಜೆಪಿ ಪಕ್ಷಕ್ಕೆ ನೋಟಿಸ್ ಜಾರಿ ಮಾಡಿದೆ.

Published On :
ನವದೆಹಲಿ: ಸರ್ಕಾರಿ ಜಾಹೀರಾತು ಪ್ರಕಟಣೆ ಕುರಿತು ನೀಡಿದ್ದ ಮಾರ್ಗದರ್ಶನವನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವೂ ಸೇರಿದಂತೆ 6 ರಾಜ್ಯ ಸರ್ಕಾರಗಳು ಮತ್ತು ಬಿಜೆಪಿ ಪಕ್ಷಕ್ಕೆ ನೋಟಿಸ್ ಜಾರಿ ಮಾಡಿದೆ.
ದೆಹಲಿ ಆಮ್ ಆದ್ನಿ ಪಕ್ಷದ ಶಾಸಕರೊಬ್ಬರು ಸಲ್ಲಿಸಿದ್ದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಇಲ್ಲಿನ ಬುರಾರಿ ಶಾಸಕ ಸಂಜೀವ್ ಝಾ ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ಒಂದು ವಾರಗಳಲ್ಲಿ ಪ್ರತಿಕ್ರಿಯೆ ದಾಖಲಿಸುವಂತೆ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ಸೂಚಿಸಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ ನಿರ್ದೇಶನಗಳನ್ನು ಉಲ್ಲಂಘಿಸಿ ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ರಾಜ್ಯಗಳು ಜಾಹೀರಾತು ಪ್ರಕಟಸಿವೆ ಎಂದು ದೂರುದಾರರು ಆರೋಪಿಸಿದ್ದಾರೆ.
ಉಲ್ಲಂಘನೆಯನ್ನು ಪರಿಶೀಲಿಸುವಂತೆ ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ರೂಪಿಸಿದ ಸಮಿತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡುವಂತೆ ಅವರು ಕೋರಿದ್ದಾರೆ. ಸಾರ್ವಜನಿಕ ಜಾಹೀರಾತು ಪ್ರಕಟಿಸುವುದನ್ನು ನಿಯಂತ್ರಿಸಲು ಪ್ರಶ್ನಾತೀತ ತಟಸ್ಥ ಹಾಗೂ ಪಕ್ಷಾತೀತ ವ್ಯಕ್ತಿಗಳನ್ನು ಒಳಗೊಂಡ ಮೂವರು ಸದಸ್ಯರ ಸಮಿತಿ ರೂಪಿಸಲು ಕೇಂದ್ರ ಸರ್ಕಾರಕ್ಕೆ ಆದೇಶ ಸೇರಿದಂತೆ ಹಲವು ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್ 2015 ಮೇ 13ರಂದು ನೀಡಿತ್ತು. ಆದಾಗ್ಯೂ, 2016 ಮಾರ್ಚ್ 18ರಂದು ಸುಪ್ರೀಂ ಕೋರ್ಟ್ ತನ್ನ ಆದೇಶಕ್ಕೆ ತಿದ್ದುಪಡಿ ತಂದಿತ್ತು ಹಾಗೂ ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ರಾಜ್ಯ ಸಚಿವರ ಚಿತ್ರಗಳು ಸರ್ಕಾರದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಬಹುದು ಎಂದು ಹೇಳಿತ್ತು.
ಅಲ್ಲದೆ ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್, ಚತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳಿಗೂ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿರುವುದು ವಿಶೇಷ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtನವದೆಹಲಿNew Delhiಸುಪ್ರೀಂ ಕೋರ್ಟ್noticeModi governmentಮೋದಿ ಸರ್ಕಾರPublic Advertisement Guidelinesಸರ್ಕಾರಿ ಜಾಹಿರಾತು ಮಾರ್ಗದರ್ಶನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


