ದೇಶ

ಪೊಲೀಸರ ಸಂಬಂಧಿಗಳ ಅಪಹರಣ: ಉಗ್ರರಿಂದ ಇಬ್ಬರ ಬಿಡುಗಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಪಹರಿಸಿದ್ದ ಪೊಲೀಸ್ ಸಿಬ್ಬಂದಿಯ ಕುಟುಂಬದ 11 ಮಂದಿಯ ಪೈಕಿ...

ಪೊಲೀಸರ ಸಂಬಂಧಿಗಳ ಅಪಹರಣ: ಉಗ್ರರಿಂದ ಇಬ್ಬರ ಬಿಡುಗಡೆ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಪಹರಿಸಿದ್ದ ಪೊಲೀಸ್ ಸಿಬ್ಬಂದಿಯ ಕುಟುಂಬದ 11 ಮಂದಿಯ ಪೈಕಿ ಇಬ್ಬರನ್ನು ಶುಕ್ರವಾರ ಸುರಕ್ಷಿತವಾಗಿ ಬಿಡುಗಡೆ ಮಾಡಿದ್ದಾರೆ.
ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಾರ್ಯಾಚರಣೆ ಕಮಾಂಡರ್ ನ ತಂದೆಯನ್ನು ಬಿಡುಗಡೆ ಮಾಡಿದ ನಂತರ ಉಗ್ರರು, ಉಪ ಪೊಲೀಸ್ ವರಿಷ್ಠಾಧಿಕಾರಿಯ ಸಹೋದರ ಸೇರಿದಂತೆ ಇಬ್ಬರನ್ನು ಬಿಡುಗಡೆ ಮಾಡಿದ್ದಾರೆ.
ಇದಕ್ಕು ಮುನ್ನ ಪೊಲೀಸರು ಬಂಧಿತ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ರಿಯಾಜ್ ನೈಕೂ ಅವರ ತಂದೆ ಅಸಾದುಲ್ಲಾ ನೈಕೂನನ್ನು ಪೊಲೀಸರು ಬಿಡುಗಡೆ ಮಾಡಿದ್ದರು.
ನಿನ್ನೆ ಉಗ್ರರು ಪೊಲೀಸರ ಮನೆಗಳಿಗೆ ನುಗ್ಗಿ 11 ಮಂದಿಯನ್ನು ಅಪಹರಣ ಮಾಡಿ, ಅಸಾದುಲ್ಲಾ ನೈಕೂ ಬಿಡುಗಡೆಗೆ ಬೇಡಿಕೆಯಿಟ್ಟಿದ್ದರು. ಅವರ ಬೇಡಿಕೆ ಈಡೇರಿಸಿದ ನಂತರ ಇಬ್ಬರನ್ನು ಬಿಡುಗಡೆ ಮಾಡಿದ್ದು, ಉಳಿದ 9 ಮಂದಿಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ್, ಕುಲ್ಗಾಮ್, ಅನಂತ್ ನಾಗ್ ಮತ್ತು ಅವಂತಿಪೋರಾದಲ್ಲಿರುವ ಪೊಲೀಸರ ಮನೆಗಳಿಗೆ ಗುರುವಾರ ರಾತ್ರಿ ನುಗ್ಗಿರುವ ಉಗ್ರರು 11 ಮಂದಿಯನ್ನು ಅಪಹರಣ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.