ದೇಶ

ಬಾಗಲಕೋಟೆ ಎಸ್‍ಪಿ ನಿವಾಸದ ಎದುರೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ

ಪೊಲೀಸ್ ಪೇದೆಯೊಬ್ಬರು ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಮನೆಯ ಮುಂದೆಯೇ ತೆಲೆಗೆ ಗುಂಡು ...

ಬಾಗಲಕೋಟೆ ಎಸ್‍ಪಿ ನಿವಾಸದ ಎದುರೇ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ
ಮಂಜುನಾಥ್ ಹರಿಜನ
Published On :
ಬಾಗಲಕೋಟೆ: ಪೊಲೀಸ್ ಪೇದೆಯೊಬ್ಬರು ಬಾಗಲಕೋಟೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಮನೆಯ ಮುಂದೆಯೇ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೇದೆ ಮಂಜುನಾಥ್ ಹರಿಜನ(28) ಎಂದು ಗುರುತಿಸಲಾಗಿದ್ದು,  ಮೂಲತಃ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮಿಟ್ಟಲಕೋಡ ಗ್ರಾಮದ ನಿವಾಸಿ ಎನ್ನಲಾಗಿದೆ.
ಕಳೆದ ಒಂದೂವರೆ ವರ್ಷದಿಂದ ಬಾಗಲಕೋಟೆಯ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್ ನಿವಾಸದ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಇಂದು ಬೆಳಗ್ಗೆ ತಮ್ಮ ಸರ್ವೀಸ್ ರೈಫಲ್ 303ರಿಂದ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ್ ಹರಿಜನ ಅವರು 2012 ರಂದು ಪೊಲೀಸ್ ಇಲಾಖೆಗೆ ಪೇದೆಯಾಗಿ ನೇಮಕವಾಗಿದ್ದರು.
ಮಂಜುನಾಥ್ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಎಸ್‌ಪಿ ಸಿ.ಬಿ.ರಿಷ್ಯಂತ್‌ ಸಹಿತ, ಪೊಲೀಸ್‌ ಅಧಿಕಾರಿಗಳು, ಬೆರಳಚ್ಚು ತಜ್ಞರು, ಶ್ವಾನದಳ ಆಗಮಿಸಿ ಪರಿಶೀಲನೆ ನಡೆಸಿದ್ದು , ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.