ಕಾವಲುಗಾರ ಕಳ್ಳ: ಪ್ರಧಾನಿ ಮೋದಿ ವಿರುದ್ಧದ ನವಜೋತ್ ಸಿಂಗ್ ಸಿಧು ಟೀಕೆಗೆ ಕಾಂಗ್ರೆಸ್ ಸಮರ್ಥನೆ!
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಕುರಿತು ಕಾವಲುಗಾರ ಕಳ್ಳ (ಚೋಕಿದಾರ್ ಚೀರ್ ಹೈ) ಎಂಬ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಟೀಕೆಗೆ ಕಾಂಗ್ರೆಸ್ ಧ್ವನಿಗೂಡಿಸಿದೆ.

Published On :
ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಕುರಿತು ಕಾವಲುಗಾರ ಕಳ್ಳ (ಚೋಕಿದಾರ್ ಚೋರ್ ಹೈ) ಎಂಬ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಟೀಕೆಗೆ ಕಾಂಗ್ರೆಸ್ ಧ್ವನಿಗೂಡಿಸಿದೆ.
ಸಿಧು ಟೀಕೆಯನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್, " ಮೋದಿಯನ್ನು ಜನರು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದರು, ಅದನ್ನು ಅರಗಿಸಿಕೊಳ್ಳಲು ಮೋದಿಗೆ ಸಾಧ್ಯವಾಗಲಿಲ್ಲ ಆ ನಂತರದಲ್ಲಿ ಮೋದಿ ತಮ್ಮನ್ನು ತಾವು ಪ್ರಧಾನ ಸೇವಕ ಎಂದರು, ಆ ನಂತರ ಪ್ರಧಾನ ಕಾವಲುಗಾರ ಎಂದು ಹೇಳಿಕೊಂಡರು. ಆದರೆ ಅವರ ಕಣ್ಣೆದುರೇ ಕಳ್ಳತನ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿಧು ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.
ಅಲ್ವಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ್ದ ಪಂಜಾಬ್ ಸಚಿವ ಸಿಧು, ರಾಫೆಲ್ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ದೇಶಾದ್ಯಂತ ಕಾವಲುಗಾರನೇ ಕಳ್ಳನಾಗಿದ್ದಾನೆ ಎಂಬ ಕೂಗು ಎದ್ದಿದೆ, ಕಾವಲುಗಾರನ ನಾಯಿಯೂ ಸಹ ಹಗರಣದಲ್ಲಿ ಶಾಮೀಲಾಗಿದೆ ಎಂದು ಹೇಳಿದ್ದರು.
ಸಿಧು ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, ಸಿಧು ಹೇಳಿಕೆಯಲ್ಲಿ ತಪ್ಪೇನು ಇಲ್ಲ ಎಂದು ಸಮರ್ಥಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


