ಕಾಶ್ಮೀರದಲ್ಲಿ ಭರ್ಜರಿ ಸೇನಾ ಕಾರ್ಯಾಚರಣೆ; 2 ಅಡಗುದಾಣದ ಮೇಲೆ ದಾಳಿ, 10 ಜೈಷ್ ಉಗ್ರರ ಬಂಧನ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಗ್ರರ 2 ಅಡಗುತಾಣಗಳ ಮೇಲೆ ದಾಳಿ ಮಾಡಿ ಬರೊಬ್ಬರಿ 10 ಮಂದಿ ಉಗ್ರರನ್ನು ಬಂಧಿಸಲಾಗಿದೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಗ್ರರ 2 ಅಡಗುತಾಣಗಳ ಮೇಲೆ ದಾಳಿ ಮಾಡಿ ಬರೊಬ್ಬರಿ 10 ಮಂದಿ ಉಗ್ರರನ್ನು ಬಂಧಿಸಲಾಗಿದೆ.
ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಕುರಿತು ಮಾಹಿತಿ ಪಡೆದ ಸೇನೆ ಕೂಡಲೇ ಆವಂತಿಪೋರಾ ಮತ್ತು ಖ್ರೂ ಎಂಬ ಪ್ರದೇಶಗಳ ಮೇಲೆ ದಾಳಿ ಮಾಡಿದೆ. ಸೇನೆಯ ದಾಳಿ ಅರಿವಿಲ್ಲದ ಉಗ್ರರಿಗೆ ದಾಳಿ ಮಾಡುವ ಅವಕಾಶವೂ ನೀಡದೇ ಉಗ್ರರನ್ನು ಸುತ್ತುವರೆದ ಸೈನಿಕರು 10 ಮಂದಿ ಉಗ್ರರನ್ನು ಬಂಧಿಸಿದ್ದಾರೆ. ಈ ರಹಸ್ಯ ಸೇನಾ ಕಾರ್ಯಾಚರಣೆಗೆ ಕಾಶ್ಮೀರ ಪೊಲೀಸರು ಕೂಡ ಸಾಥ್ ನೀಡಿದ್ದು, ಬಂಧಿತರಿಂದ ಭಾರಿ ಪ್ರಮಾಣದ ಸ್ಫೋಟಕ ಮತ್ತು ಶಾಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇನ್ನು ಬಂಧಿತ ಉಗ್ರರೆಲ್ಲರೂ ಜೈಷ್ ಇ ಮೊಹಮದ್ ಉಗ್ರ ಸಂಘಟನೆಯ ಉಗ್ರರು ಎಂದು ತಿಳಿದುಬಂದಿದ್ದು, ಸ್ಥಳೀಯ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಅಲ್ಲದೆ ಸ್ಥಳೀಯ ಯುವಕರನ್ನು ಉಗ್ರ ಸಂಘಟನೆಗೆ ಸೇರುವಂತೆ ಪ್ರೇರೇಪಿಸುತ್ತಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.
ನಿನ್ನೆ ತ್ರಾಲ್ ನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲೂ ಇವರ ಕೈವಾಡವಿತ್ತು ಎನ್ನಲಾಗಿದೆ. ಪ್ರಸ್ತುತ ಬಂಧಿತ 10 ಮಂದಿಯ ಪೈಕಿ ನಾಲ್ಕು ಮಂದಿಯ ಗುರುತು ಪತ್ತೆಯಾಗಿದ್ದು, ಪಿಂಗ್ಲಿಷ್ ನಿವಾಸಿ ಯೂನಿಸ್ ನಬಿ ನಾಯ್ಕ್, ರೆಶಿಪೋರಾ ನಿವಾಸಿ ಫಯಾಜ್ ಅಹ್ಮದ್ ವಾನಿ, ನಿಗೀನ್ ಪೋರಾ ನಿವಾಸಿಗಳಾದ ರಿಯಾಜ್ ಅಹ್ಮದ್ ಗನಲೆ ಮತ್ತು ಬಿಲಾಲ್ ಅಹ್ಮದ್ ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಶ್ರೀನಗರSrinagarterroristsಜಮ್ಮು ಮತ್ತು ಕಾಶ್ಮೀರJammu and Kashmirಭಯೋತ್ಪಾದಕರುಜೈಶ್ ಇ ಮೊಹಮ್ಮದ್Jaish E Mohammad
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


