ಬಿಜೆಪಿಯತ್ತ ರಜನಿ? ಒಳ್ಳೆಯದನ್ನು ಮಾಡಲು ಪ್ರಧಾನಿ ಮೋದಿ ಸರ್ವ ಪ್ರಯತ್ನ ಅಂದ್ರು ಸೂಪರ್ ಸ್ಟಾರ್!
ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೈಯಲ್ಲಾದ ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್...

Published On :
ಚೆನ್ನೈ: ದೇಶಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕೈಯಲ್ಲಾದ ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ದಕ್ಷಿಣ ಭಾರತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದು ಇದೀಗ ರಜನಿ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬ ತುಡಿದ ಪ್ರಧಾನಿ ಮೋದಿಯಲ್ಲಿದೆ. ದೇಶಕ್ಕಾಗಿ ಒಳ್ಳೆಯದನ್ನು ಮಾಡಲು ಅವರು ತಮ್ಮ ಕೈಯಲ್ಲಾದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದರು.
ಇನ್ನು ತಮಿಳಿನ ಖ್ಯಾತ ನಟ ಮತ್ತು ಮಕ್ಕಳ್ ನಿಧಿ ಮೈಮ ಮುಖಂಡ ಕಮಲ್ ಹಾಸನ್ ಅವರು ನನ್ನ ಪ್ರತಿಸ್ಪರ್ಧಿಯಲ್ಲ. ನನ್ನ ಆಪ್ತಮಿತ್ರ ಎಂದು ರಜನಿಕಾಂತ್ ಹೇಳಿದ್ದಾರೆ.
ಈ ಹಿಂದೆ ರಜನಿಕಾಂತ್ ಅವರು ಮೋದಿ ವಿರುದ್ಧ ಹತ್ತು ಮಂದಿ ಹೊಂದಾಗುತ್ತಿದ್ದಾರೆ ಎಂದರೆ ಯಾರು ಬಲಿಷ್ಠರು ಎಂದು ತಿಳಿಯುತ್ತದೆ ಎಂದು ಪ್ರಧಾನಿ ಮೋದಿಯನ್ನು ಹೊಗಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


