ಉತ್ತರ ಪ್ರದೇಶ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಪೊಲೀಸ್ ಅಧಿಕಾರಿ ಸಾವು
ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಅಕ್ರಮ ಕಸಾಯಿಖಾನೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ....

Published On :
ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶೆಹರ್ ನಲ್ಲಿ ಅಕ್ರಮ ಕಸಾಯಿಖಾನೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಗಲಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.
ಇಂದು ಅಕ್ರಮ ಕಸಾಯಿಖಾನೆ ವಿರುದ್ಧ ಸ್ಥಳೀಯ ಗುಂಪು ಪ್ರತಿಭಟನೆ ನಡೆಸುತ್ತಿತ್ತು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸ್ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಲಭೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಪೊಲೀಸರ ಮೇಲೆ ಗುಂಡಿನ ದಾಳಿ ಸಹ ನಡೆಸಿದ್ದಾರೆ ಎನ್ನಲಾಗಿದೆ.
ಗಲಭೆಯಲ್ಲಿ ಪೊಲೀಸ್ ಅಧಿಕಾರಿ ಸುಬೋಧ್ ಕುಮಾರ್ ಸಿಂಗ್ ಎಂಬುವವರು ಮೃತಪಟ್ಟಿದ್ದಾರೆ.
ಸುತ್ತಮುತ್ತಲ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೀರತ್ ಎಡಿಜಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಭದ್ರತೆಗಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಔರಂಗಾಬಾದ್-ಜಹಂಗಿರಾಬಾದ್ ನಡುವಿನ ಮಾರ್ಗದಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಹಾಪುರದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


