ಪ್ರಧಾನಿ ಮೋದಿ ತಮ್ಮನ್ನು ತಾವು ದೇವರೆಂದು ಘೋಷಿಸಿಕೊಂಡಿದ್ದಾರಾ?: ಅಸಾದುದ್ದೀನ್ ಓವೈಸಿ
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಕುರಿತಂತೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ, ಮೌನವಹಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರವಾಗಿ ಕಿಡಿಕಾರಿದ್ದಾರೆ...

Published On :
ಹೈದರಾಬಾದ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಕುರಿತಂತೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ, ಮೌನವಹಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ತೀವ್ರವಾಗಿ ಕಿಡಿಕಾರಿದ್ದಾರೆ.
ನಮ್ಮನ್ನು ದೇಶಬಿಟ್ಟು ಓಡುವಂತೆ ಮಾಡುತ್ತೇವೆಂದು ಬಿಜೆಪಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಹಾಗದಲೂ ಪ್ರಧಾನಮಂತ್ರಿಗಳಿಗೆ ನಾವೇನೂ ಹೇಳಬಾರದೆ? ಪ್ರಧಾನಿ ಮೋದಿಯವರು ತಮ್ಮನ್ನು ತಾವು ದೇವರೆಂದು ಘೋಷಿಸಿಕೊಂಡಿದ್ದಾರಾ? ಪ್ರಧಾನಿ ಮೋದಿ ಪ್ರಜಾಪ್ರಭುತ್ವ ಆಯ್ಕೆ ಮಾಡಿದ ನಾಯಕರಾಗಿದ್ದಾರೆ. ಅವರನ್ನು ಟೀಕೆ ಮಾಡುವುದು ಸಂವಿಧಾನಬದ್ಧ ಹಕ್ಕು ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ಯೋಗಿ ಆದಿತ್ಯನಾಥ್ ಅವರು, ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದೇ ಆದರೆ, ನಿಜಾಮರಂತೆ ಓವೈಸಿ ಕೂಡ ರಾಜ್ಯ ಬಿಟ್ಟು ಓಡುವಂತೆ ಮಾಡುತ್ತೇವೆಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


