ಮೋದಿ ಸರ್ಕಾರದ ನಡೆಗೆ ಆಕ್ಷೇಪ: ರಾಷ್ಟ್ರಪತಿಗಳನ್ನು ಭೇಟಿ ಮಾಡಲಿರುವ ವಿಪಕ್ಷ ನಾಯಕರು!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು ರಾಷ್ಟ್ರಪತಿಗಳನ್ನು ಭೇಟಿ ಮಾಡಲು ನಿರ್ಧರಿಸಿವೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನಡೆಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು ರಾಷ್ಟ್ರಪತಿಗಳನ್ನು ಭೇಟಿ ಮಾಡಲು ನಿರ್ಧರಿಸಿವೆ.
ಭಾರತ ಸರ್ಕಾರದಿಂದ ಪ್ರಕಟವಾಗುವ 2019, ಹೊಸ ವರ್ಷದ ಕ್ಯಾಲೆಂಡರ್ ನ ಪ್ರತಿ ತಿಂಗಳಲ್ಲೂ ಮೋದಿ ನೇತೃತ್ವದ ಸರ್ಕಾರದ ಜನಪ್ರಿಯ ಸಮಾಜ ಕಲ್ಯಾಣ ಯೋಜನೆಗಳ ಬಗ್ಗೆ ಫೋಟೊ ಸಹಿತ ಮಾಹಿತಿ ನೀಡಲಾಗಿದೆ. ಇದಷ್ಟೇ ಅಲ್ಲದೇ ಖಾದಿ ಗ್ರಾಮೋದ್ಯೋಗ ಭವನ ಸಹ ಮಹಾತ್ಮ ಗಾಂಧಿ ಚಿತ್ರವನ್ನು ಮೋದಿ ಚಿತ್ರದೊಂದಿಗೆ ಬದಲಾವಣೆ ಮಾಡಿದೆ. ಈ ವಿಷಯಕ್ಕೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷಗಳು 2019 ಚುನಾವಣಾ ವರ್ಷವಾಗಿದೆ. ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಗೆ ಬರಲಿದೆ. ಆದರೆ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರಿ ಕ್ಯಾಲೆಂಡರ್ ಇರಲಿರುವ ಹಿನ್ನೆಲೆಯಲ್ಲಿ ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ ಎಂದು ವಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕ್ಯಾಲೆಂಡರ್ ಗೆ ವಿರೋಧ ವ್ಯಕ್ತಪಡಿಸಿ ವಿರೋಧ ಪಕ್ಷಗಳು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಾಧ್ಯತೆಗಳಿವೆ. ಆದರೆ ಯುಪಿಎ ಸರ್ಕಾರದ ಅವಧಿಯಲ್ಲೂ ಇದೇ ರೀತಿಯಾಗಿತ್ತಾದ್ದರಿಂದ ಕಾಂಗ್ರೆಸ್ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದರಿಂದ ದೂರ ಉಳಿಯಲಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


