ಭಾರತದ ಬಾಹ್ಯಾಕಾಶ ಯೋಜನೆಯಲ್ಲಿ ಮಹತ್ವದ ಮೈಲಿಗಲ್ಲು: ಪ್ರಧಾನಿ ನರೇಂದ್ರ ಮೋದಿ
ಭಾರತ ಬುಧವಾರ ಜಿಸ್ಯಾಟ್-11 ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ್ದಕ್ಕೆ ಪ್ರಧಾನ ಮಂತ್ರಿ ...

ನವದೆಹಲಿ: ಭಾರತ ಬುಧವಾರ ಜಿಸ್ಯಾಟ್-11 ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಿದ್ದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಇಸ್ರೊ ಸಂಸ್ಥೆಯ ವಿಜ್ಞಾನಿಗಳನ್ನು ಶ್ಲಾಘಿಸಿರುವ ಅವರು, ಭಾರತದ ಅತಿ ಭಾರವಾದ ಸುಧಾರಿತ ಸಂವಹನ ಉಪಗ್ರಹವಾದ ಜಿಸ್ಯಾಟ್-11 ಹಳ್ಳಿ ಹಳ್ಳಿಗೂ ತಲುಪಲಿದೆ. ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಮಹತ್ವದ ಮೈಲಿಗಲ್ಲು, ಭಾರತ ತನ್ನ ವಿಜ್ಞಾನಿಗಳ ಬಗ್ಗೆ ಹೆಮ್ಮೆಪಡುತ್ತದೆ.
ಸಂಶೋಧನೆ, ಸೃಜನಶೀಲತೆಯಲ್ಲಿ ತೊಡಗಿರುವ ನಮ್ಮ ವಿಜ್ಞಾನಿಗಳು ಸಾಧನೆ, ಯಶಸ್ಸಿನಲ್ಲಿ ಅತಿ ಉನ್ನತ ಗುಣಮಟ್ಟವನ್ನು ಕಾಪಾಡಿಕೊಂಡಿರುತ್ತಾರೆ. ಅವರ ಮಹತ್ತರ ಕೆಲಸ ಮತ್ತು ಸಾಧನೆಗಳು ಪ್ರತಿ ಭಾರತೀಯರಿಗೆ ಸ್ಪೂರ್ತಿಯಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


