ಅಗಸ್ಟಾ ಹಗರಣ: ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಗೆ 5 ದಿನಗಳ ಕಾಲ ಸಿಬಿಐ ಕಸ್ಟಡಿ
,600 ಕೋಟಿ ರೂ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಮಧ್ಯವರ್ತಿ ಹಾಗೂ ವಿವಿಐಪಿ ಆರೋಪಿಯಾಗಿರುವ ಕ್ರಿಶ್ಚಿಯನ್ ಮೈಕೆಲ್‌ನನ್ನು ದೆಹಲಿ ನ್ಯಾಯಾಲಯ ಐದು ದಿನಗಳ ಕಾಲ ಸಿಬಿಐ....

Published On :
ನವದೆಹಲಿ: 3,600 ಕೋಟಿ ರೂ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಮಧ್ಯವರ್ತಿ ಹಾಗೂ ವಿವಿಐಪಿ ಆರೋಪಿಯಾಗಿರುವ ಕ್ರಿಶ್ಚಿಯನ್ ಮೈಕೆಲ್‌ನನ್ನು ದೆಹಲಿ ನ್ಯಾಯಾಲಯ ಐದು ದಿನಗಳ ಕಾಲ ಸಿಬಿಐ ವಶಕ್ಕೆ ಒಪಿಸಿದೆ.
ಮಂಗಳವಾರ ರಾತ್ರಿ ಗಡೀಪಾರಾಗಿದ್ದ ಕ್ರಿಶ್ಚಿಯನ್ ಮೈಕೆಲ್‌ನನ್ನುಬುಧವಾರ ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ಗೆ ಹಾಜರುಪಡಿಸಿದ್ದರು.
ಈ ವೇಳೆ ಸಿಬಿಐ ಮೈಕೆಲ್ ಅವರನ್ನು 14 ದಿನಗಳ ಕಾಲ ಕಸ್ಟಡಿಗಾಗಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಐದು ದಿನಗಳ ಕಾಲ ವಶಕ್ಕೆ ನೀಡಿ ಆದೇಶಿಸಿದೆ.
ಡಿಸೆಂಬರ್ 10 ರಂದು ಮೈಕೆಲ್ ಅವರನ್ನು ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಯುಕೆ ಪ್ರಜೆಯಾಗಿರುವ ಮೈಕೆಲ್ ದುಬೈನಿಂದ ಮಂಗಳವಾರ ರಾತ್ರಿ ಭಾರತಕ್ಕೆ ಗಡೀಪಾರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಗಸ್ಟಾ ವೆಸ್ಟ್ ಲ್ಯಾಂಡ್Christian Michelಕ್ರಿಶ್ಚಿಯನ್ ಮೈಕೆಲ್VVIP chopper caseAugusta Westlandವಿವಿಐಪಿ ಚಾಪರ್ ಕೇಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


