2019 ಲೋಕಸಭಾ ಚುನಾವಣೆ: ಪುಣೆಯಿಂದ ಮಾಧುರಿ ದೀಕ್ಷಿತ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?
2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

Published On :
ಮುಂಬೈ: 2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಜೂನ್ ತಿಂಗಳಲ್ಲಿ ಸಮರ್ಥನಾ ಸಂಪರ್ಕ ಅಭಿಯಾನದ ಅಂಗವಾಗಿ ಮಾಧುರಿ ದೀಕ್ಷಿತ್ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ದೀಕ್ಷಿತ್ ಅವರೊಂದಿಗೆ ಹಂಚಿಕೊಂಡಿದ್ದರು.
ಪುಣೆ ಲೋಕಸಭಾ ಕ್ಷೇತ್ರದಲ್ಲಿನ ಬಿಜೆಪಿ ಅಭ್ಯರ್ಥಿಗಳ ಕಿರುಪಟ್ಟಿಯಲ್ಲಿ ಮಾಧುರಿ ದೀಕ್ಷಿತ್ ಅವರ ಹೆಸರು ಇರುವುದಾಗಿ ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


