ದೇಶ

ಸಂಸತ್ ಚಳಿಗಾಲದ ಅಧಿವೇಶನ: ಸರ್ವಪಕ್ಷ ಸಭೆ ಕರೆದ ಸರ್ಕಾರ

ಡಿಸೆಂಬರ್ 11ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಉಭಯ ಸದನಗಳ ಕಲಾಪವನ್ನು ಸುಗಮವಾಗಿ

ಸಂಸತ್ ಚಳಿಗಾಲದ ಅಧಿವೇಶನ: ಸರ್ವಪಕ್ಷ ಸಭೆ ಕರೆದ ಸರ್ಕಾರ
ಸಂಸತ್ ಭವನ
Published On :
ನವದೆಹಲಿ: ಡಿಸೆಂಬರ್ 11ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಉಭಯ ಸದನಗಳ ಕಲಾಪವನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಡಿಸೆಂಬರ್ 10ರಂದು ಸರ್ವಪಕ್ಷ ಸಭೆ ಕರೆದಿದೆ. 
ಸೋಮವಾರ ನಡೆಯುವ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರದ ಅಜೆಂಡಾವನ್ನು ಪ್ರತಿಪಕ್ಷಗಳ ಮುಂದಿಟ್ಟು, ಸಹಕಾರ ಕೋರಲಿದ್ದಾರೆ.
ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ ಪೂರ್ಣ ಪ್ರಮಾಣದ ಅಧಿವೇಶನ ಇದಾಗಿದ್ದು, ಡಿಸೆಂಬರ್ 11ರಿಂದ ಜನವರಿ 8ರವರೆಗೆ ನಡೆಯಲಿದೆ.
ಚಳಿಗಾಲದ ಅಧಿವೇಶನ ಆರಂಭವಾಗುವ ದಿನವೇ ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಅಧಿವೇಶನದಲ್ಲಿ ಬಿಸಿಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.