ಪರಾರಿಯಾಗಿರುವ ಆರ್ಥಿಕ ಅಪರಾಧಿ ಘೋಷಣೆ ವಿರುದ್ಧ ಮಲ್ಯ ಅರ್ಜಿ: ಇಡಿ ಗೆ ಸುಪ್ರೀಂ ಕೋರ್ಟ್ ನೊಟೀಸ್
ಮದ್ಯದ ಉದ್ಯಮಿ ಸುಸ್ತಿದಾರ ವಿಜಯ್ ಮಲ್ಯ, ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು...

Published On :
ನವದೆಹಲಿ: ಮದ್ಯದ ಉದ್ಯಮಿ ಸುಸ್ತಿದಾರ ವಿಜಯ್ ಮಲ್ಯ, ತಮ್ಮನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ನಡೆಯುತ್ತಿರುವ ಪ್ರಕ್ರಿಯೆ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ಈಗ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೊಟೀಸ್ ಜಾರಿ ಮಾಡಿದೆ.
ಮಲ್ಯ ಅವರನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೊಷಿಸುವುದಕ್ಕೆ ಮುಂಬೈ ಕೋರ್ಟ್ ನಲ್ಲಿ ಪ್ರಕ್ರಿಯೆಗಳು ಚಾಲನೆಯಲ್ಲಿವೆ. ಈ ಪ್ರಕ್ರಿಯೆಯನ್ನು ಪ್ರಶ್ನಿಸಿ ವಿಜಯ್ ಮಲ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮಲ್ಯ ಅರ್ಜಿ ವಿಚಾರಾಣೆ ನಡೆಸಿದ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾ. ರಂಜನ್ ಗೊಗೋಯ್, ನ್ಯಾ. ಎಸ್.ಕೆ ಕೌಲ್ ಅವರಿದ್ದ ವಿಭಾಗೀಯ ಪೀಠ, ಮಲ್ಯ ಅರ್ಜಿ ಕುರಿತು ಇ.ಡಿ ಪ್ರತಿಕ್ರಿಯೆ ಕೇಳಿದೆ.
ಆರ್ಥಿಕ ಅಪರಾಧಗಳ ಕಾಯ್ದೆ 2018 ರ ಅಡಿಯಲ್ಲಿ ಮಲ್ಯ ಅವರನ್ನು ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲು ಇಡಿ ವಿಶೇಷ ನ್ಯಾಯಾಲಯದ ಮೊರೆ ಹೋಗಿತ್ತು. ಈಗ ಸುಪ್ರೀಂ ಕೋರ್ಟ್ ಇಡಿ ಪ್ರತಿಕ್ರಿಯೆ ಕೇಳಿದೆ ಆದರೆ ಮುಂಬೈ ಕೋರ್ಟ್ ನಲ್ಲಿ ನಡೆಯುತ್ತಿರುವ ಪ್ರಕ್ರಿಯೆಗಳಿಗೆ ತಡೆ ನೀಡಲು ನಿರಾಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Vijay Mallyaವಿಜಯ್ ಮಲ್ಯEDಇಡಿFugitive economic offenderಪರಾರಿಯಾಗಿರುವ ಆರ್ಥಿಕ ಅಪರಾಧಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


