ನಾನೇ ದೊಡ್ಡ ವಿಶ್ಲೇಷಕ, ಈ ಬಾರಿ ಬಿಜೆಪಿಗೇ ಅಧಿಕಾರ: ಶಿವರಾಜ್ ಸಿಂಗ್ ಚೌಹಾಣ್
ಮಧ್ಯಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರ ಪೈಪೋಟಿಯನ್ನು ಅಂದಾಜಿಸಿದೆ.

Published On :
ಮಧ್ಯಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಕಾಂಗ್ರೆಸ್-ಬಿಜೆಪಿ ನಡುವೆ ನೇರಾ ನೇರ ಪೈಪೋಟಿಯನ್ನು ಅಂದಾಜಿಸಿದೆ. ಈ ನಡುವೆ ತಮ್ಮನ್ನು ತಾವೇ ದೊಡ್ಡ ವಿಶ್ಲೇಷಕ ಎಂದು ಹೇಳಿಕೊಂಡಿರುವ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಈ ಬಾರಿ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು ಖಚಿತ ಎಂದಿದ್ದಾರೆ.
ನಾನು ದಿನದ ಬಹುತೇಕ ಸಮಯ ಸಾರ್ವಜನಿಕರೊಂದಿಗೇ ಕಳೆಯುತ್ತೇನೆ ಆದ್ದರಿಂದ ನಾನೇ ದೊಡ್ಡ ಚುನಾವಣಾ ವಿಶ್ಲೇಷಕ, ಬಿಜೆಪಿ ಸತತ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಡಾಟಿಯಾದಲ್ಲಿರುವ ಶ್ರೀ ಪೀತಾಂಬರ ಪೀಠ ದೇವಾಲಯಕ್ಕೆ ಭೇಟಿ ನೀಡಿರುವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ಪ್ರಬಲ ಪೈಪೋಟಿಯೊಡ್ಡುತಿರುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿವರಾಜ್ ಸಿಂಗ್ ಚೌಹಾಣ್ ಉತ್ತರಿಸಿದ್ದು, ಸಮಾಜದ ಎಲ್ಲ ವರ್ಗದವರಿಂದ ನಮಗೆ ಚುನಾವಣೆಯಲ್ಲಿ ಆಶೀರ್ವಾದ ದೊರೆತಿದೆ. ನಾವು ಗೆಲುವಿನ ಸನಿಹದಲ್ಲಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿಚುನಾವಣೋತ್ತರ ಸಮೀಕ್ಷೆಶಿವರಾಜ್ ಸಿಂಗ್ ಚೌಹಾಣ್ಮಧ್ಯಪ್ರದೇಶMadhyapradeshexit poll surveyShivraj Singh
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


