ಸಿದ್ದಗಂಗಾ ಶ್ರೀಗಳಿಗೆ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿ; 7 ದಿನಗಳ ಕಾಲ ವಿಶ್ರಾಂತಿ ಅಗತ್ಯ-ವೈದ್ಯರು
ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಚೆನ್ನೈ ನ ಡಾ.ರೇಲಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಸತತ ಮೂರು ಗಂಟೆಗಳ ಕಾಲ ನಡೆಸಲಾದ ಲಿವರ್ ಬೈಪಾಸ್ ಹಾಗೂ ಪಿತ್ತಕೋಶ

Published On :
ಚೆನ್ನೈ: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಚೆನ್ನೈ ನ ಡಾ.ರೇಲಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಸತತ ಮೂರು ಗಂಟೆಗಳ ಕಾಲ ನಡೆಸಲಾದ ಲಿವರ್ ಬೈಪಾಸ್ ಹಾಗೂ ಪಿತ್ತಕೋಶ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಡಾ. ಮಹಮದ್ ರೇಲಾ ಅವರು 111 ರ ಹರೆಯದ ಶ್ರೀಗಳಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಮಾತನಾಡಿರುವ ಬಿಜಿಎಸ್ ಆಸ್ಪತ್ರೆಯ ವೈದ್ಯ ಡಾ. ರವೀಂದ್ರ, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಶ್ರೀಗಳಿಗೆ ಇನ್ನೂ 7 ದಿನಗಳ ಕಾಲ ಸಂಪೂರ್ಣ ವಿಶ್ರಾಂತಿ ಅಗತ್ಯವಿದೆ ಎಂದು ಹೇಳಿದ್ದಾರೆ.
ಶಸ್ತ್ರಚಿಕಿತ್ಸೆಗಾಗಿ ನೀಡಲಾಗಿದ್ದ ಅರವಳಿಕೆಯಿಂದ ಚೇತರಿಸಿಕೊಂಡ ನಂತರ ಶ್ರೀಗಳು ಮಾತನಾಡಿದ್ದು, ಆಸ್ಪತ್ರೆ ಸಿಬ್ಬಂದಿಗಳ ಬಳಿ ತಾವು ಇರುವ ಸ್ಥಳದ ಬಗ್ಗೆ ಕೇಳಿದ್ದು, ಕಿರಿಯ ಶ್ರೀಗಳ ಬಗ್ಗೆ ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


