ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 3 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಮುಜ್ಗುಂದ್ ಎಂಬಲ್ಲಿ ಭಾರತೀಯ ಸೇನಾ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮುಜ್ಗುಂದ್ ಎಂಬಲ್ಲಿ ಭಾರತೀಯ ಸೇನಾ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದೆ.
ಮುಜ್ಗುಂದ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಹಿನ್ನಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಕೂಡಲೇ ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾಪಡೆಗಳು 3 ಉಗ್ರರನ್ನು ಹತ್ಯೆ ಮಾಡಿದೆ. ಎನ್ ಕೌಂಟರ್ ನಡೆದ ಸ್ಥಳದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಗ್ರರ ಗುರ್ತಿಕೆ ಕುರಿತು ತನಿಖೆ ನಡೆಸಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಂಡಿಪೋರಾದ ಮುಜ್ಗುಂದ್ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಗಳು ನಿನ್ನೆಯಿಂದಲೂ ಸುದೀರ್ಘವಾಗಿ ಕಾರ್ಯಾಚರಣೆ ನಡೆಸುತ್ತಿಲೇ ಇದೆ. ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಲು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರLETTerror AttackJammu and Kashmirಉಗ್ರರ ದಾಳಿjawansಯೋಧರುಭಾರತೀಯ ಸೇನೆಎಲ್ಇಟಿMujgund encounterಮುಜ್ಗುಂದ್ ಎನ್\'ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


