ದೇಶ

ಮಮತಾ ಧೈರ್ಯವಂತ ಮಹಿಳೆ, ಬಿಜೆಪಿ ವಿರೋಧಿ ಮೈತ್ರಿಕೂಟ ಮುನ್ನಡೆಸಬಲ್ಲರು: ಸಿನ್ಹಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹಾಡಿಹೊಗಳಿದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ....

ಮಮತಾ ಧೈರ್ಯವಂತ ಮಹಿಳೆ, ಬಿಜೆಪಿ ವಿರೋಧಿ ಮೈತ್ರಿಕೂಟ ಮುನ್ನಡೆಸಬಲ್ಲರು: ಸಿನ್ಹಾ
ಯಶವಂತ್ ಸಿನ್ಹಾ
Published On :
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಹಾಡಿಹೊಗಳಿದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು, ದೀದಿ ಒಬ್ಬ ಧೈರ್ಯವಂತ ಮಹಿಳೆಯಾಗಿದ್ದು, ಅವರಿಗೆ ಬಿಜೆಪಿ ವಿರೋಧಿ ಮೈತ್ರಿಕೂಟವನ್ನು ಮುನ್ನಡೆಸುವ ಸಾಮರ್ಥ್ಯ ಇದೆ ಎಂದು ಸೋಮವಾರ ಹೇಳಿದ್ದಾರೆ.
ಇಂದು ತೃಣಮೂಲ ಕಾಂಗ್ರೆಸ್ ಆಯೋಜಿಸಿದ್ದ ಐಡಿಯಾ ಆಫ್ ಬೆಂಗಾಲ್  ಟಾಕ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಅನ್ನು ಸೋಲಿಸು ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯಾದರೆ, ಅದರನ್ನು ನೇತೃತ್ವವನ್ನು ವಹಿಸಿಕೊಳ್ಳಲು ಬೇಕಾದ ಅಲ್ಲ ಅರ್ಹತೆಗಳನ್ನು ಮಮತಾ ಹೊಂದಿದ್ದಾರೆ ಎಂದರು.
ಸ್ವತಃ ನನಗೂ ಸಮ್ಮಿಶ್ರ ಸರ್ಕಾರದ ಅನುಭವ ಆಗಿದೆ. ಪ್ರಧಾನಮಂತ್ರಿಗೆ ಎಲ್ಲಾ ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಾಮರ್ಥ್ಯವಿದ್ದರೆ ಉತ್ತಮ ಮತ್ತು ಸ್ಥಿರ ಸರ್ಕಾರ ನೀಡಬಹುದು ಎಂದು ವಾಜಪೇಯಿ ಸರ್ಕಾರದಲ್ಲಿ ಹಣಕಾಸು ಮತ್ತು ವಿದೇಶಾಂಗ ಖಾತೆ ಹೊಂದಿದ್ದ ಯಶವಂತ್ ಸಿನ್ಹಾ ಅವರು ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಹಾಗೂ ಅವರ ತೃಣಮೂಲ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಲಿದೆ ಎಂದು ಮಾಜಿ ಬಿಜೆಪಿ ಹಿರಿಯ ನಾಯಕ ತಿಳಿಸಿದ್ದಾರೆ.
ಇದೇ ವೇಳೆ  ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿನ್ಹಾ ಅವರು, ಪ್ರಮುಖ ಮಸೂದೆಯನ್ನು ಅಂಗೀಕರಿಸುವ ಸಮಯದಲ್ಲಿ ರಾಜ್ಯಸಭೆಯನ್ನು "ಹಾಳುಮಾಡಲು  ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು  ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.