ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿ, ಜೇಟ್ಲಿ, ರಘುರಾಮ್ ರಾಜನ್, ಸ್ವಾಮಿ ಹೇಳಿದ್ದು ಹೀಗೆ
ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆ ಆರ್ಥಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು....

Published On :
ನವದೆಹಲಿ: ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆ ಆರ್ಥಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವ ಅರುಣ್ ಜೇಟ್ಲಿ, ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಮಾಜಿ ಆರ್ ಬಿಐ ಗೌರ್ನರ್ ರಘುರಾಮ್ ರಾಜನ್ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.
ಮಾಜಿ ಆರ್ ಬಿಐ ಗೌರ್ನರ್ ರಘುರಾಮ್ ರಾಜನ್: ತಮ್ಮ ಮಾಜಿ ಸಹೋದ್ಯೋಗಿ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜಿನಾಮೆ ಬಗ್ಗೆ ಆರ್ ಬಿಐ ನ ಮಾಜಿ ಗೌರ್ನರ್ ರಘುರಾಮ್ ರಾಜನ್ ಸಹ ಪ್ರತಿಕ್ರಿಯೆ ನೀಡಿದ್ದು, ಉರ್ಜಿತ್ ಪಟೇಲ್ ರಾಜೀನಾಮೆಯನ್ನು ಭಾರತೀಯರಿಗೆ ಆತಂಕದ ವಿಷಯ ಎಂದು ಹೇಳಿದ್ದಾರೆ.
"ಉರ್ಜಿತ್ ಪಟೇಲ್ ರಾಜೀನಾಮೆ ಬೆಳವಣಿಗೆ ಭಾರತೀಯರಿಗೆ ಆತಂಕ ಉಂಟುಮಾಡುವ ವಿಷಯ, ಏಕೆಂದರೆ ಆರ್ಥಿಕ ವಿಷಯಗಳ ಬೆಳವಣಿಗೆ ಹಾಗೂ ಸ್ಥಿರತೆಗಾಗಿ ಸಂಸ್ಥೆಗಳು ಬಲಿಷ್ಠವಾಗಿರಬೇಕಾಗುತ್ತದೆ. ಉರ್ಜಿತ್ ಪಟೇಲ್ ಅವರ ಹೇಳಿಕೆಯನ್ನು ಗೌರವಿಸಬೇಕು ಹಾಗೂ ಅವರು ರಾಜೀನಾಮೆ ನೀಡಲು ಒತ್ತಡವಾಗಿ ಪರಿಣಮಿಸಿದ ಬಿಕ್ಕಟ್ಟಿನ ಬಗ್ಗೆ ನಾವು ವಿವರವಾಗಿ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಸುಬ್ರಹ್ಮಣಿಯನ್ ಸ್ವಾಮಿ: ಉರ್ಜಿತ್ ಪಟೇಲ್ ಅವರ ರಾಜೀನಾಮೆಯನ್ನು ದೇಶದ ಆರ್ಥಿಕತೆಗೆ ಒಳ್ಳೆಯದಲ್ಲ ಎಂದು ಸ್ವತಃ ಆರ್ಥಿಕ ತಜ್ಞರೂ ಆಗಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. "ಉರ್ಜಿತ್ ಪಟೇಲ್ ರಾಜೀನಾಮೆ ದೇಶದ ಆರ್ಥಿಕತೆ, ಆರ್ ಬಿಐ, ಸರ್ಕಾರಗಳಿಗೆ ಒಳ್ಳೆಯದಲ್ಲ. ಮುಂದಿನ ಆರ್ ಬಿಐ ಗೌರ್ನರ್ ಬರುವವರೆಗೆ ಜುಲೈ ತಿಂಗಳ ವರೆಗೆ ಉರ್ಜಿತ್ ಪಟೇಲ್ ಅವರು ಗೌರ್ನರ್ ಸ್ಥಾನದಲ್ಲಿ ಮುಂದುವರೆಯಬೇಕು, ಪ್ರಧಾನಿ ನರೇಂದ್ರ ಮೋದಿ, ದೇಶದ ಹಿತಾಸಕ್ತಿಯಿಂದ ಉರ್ಜಿತ್ ಪಟೇಲ್ ಅವರೊಂದಿಗೆ ಮಾತುಕತೆ ನಡೆಸಿ ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸಬೇಕು ಎಂದು ಸ್ವಾಮಿ ಹೇಳಿದ್ದಾರೆ.
ಅರುಣ್ ಜೇಟ್ಲಿ: ಇದೇ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ಸಹ ಪ್ರತಿಕ್ರಿಯೆ ನೀಡಿದ್ದು, ಉರ್ಜಿತ್ ಪಟೇಲ್, ಗೌರ್ನರ್ ಹಾಗೂ ಡೆಪ್ಯುಟಿ ಗೌರ್ನರ್ ಆಗಿ ಸಲ್ಲಿಸಿರುವ ಸೇವೆ ಶ್ಲಾಘನಾರ್ಹವಾಗಿದ್ದು ಸರ್ಕಾರ ಅವರ ರಾಜೀನಾಮೆಯನ್ನು ಅಂಗೀಕರಿಸುತ್ತದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ: ಇನ್ನು ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿಯೂ ಟ್ವೀಟ್ ಮಾಡಿದ್ದು, ಉರ್ಜಿತ್ ಪಟೆಲ್ ಆರ್ಥಿಕ ವಿಷಯಗಳ ಬಗ್ಗೆ ಆಳವಾದ ಮತ್ತು ಒಳನೋಟವನ್ನು ಹೊಂದಿರುವ ಸಮರ್ಥ ಅರ್ಥಶಾಸ್ತ್ರಜ್ಞರಾಗಿದ್ದು, ಬ್ಯಾಂಕಿಂಗ್ ವ್ಯವಸ್ಥೆಯನ್ನು ಮೇಲೆತ್ತಿದ್ದರು, ಉರ್ಜಿತ್ ಪಟೇಲ್ ನೇತೃತ್ವದಲ್ಲಿ ಆರ್ ಬಿಐ ಆರ್ಥಿಕ ಸ್ಥಿರತೆ ಕಾಯ್ದುಕೊಂಡಿತ್ತು. ಉರ್ಜಿತ್ ಪಟೇಲ್ ಶ್ರೇಷ್ಠ ಹಾದಿಯನ್ನು ಹಾಕಿಕೊಟ್ಟಿದ್ದಾರೆ. ಆರ್ ಬಿಐ ನಲ್ಲಿ ಉರ್ಜಿತ್ ಪಟೇಲ್ ಅವರ ಅನುಪಸ್ಥಿತಿ ಅಗಾಧವಾಗಿ ಕಾಡಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಧಾನಿ ನರೇಂದ್ರ ಮೋದಿರಾಜೀನಾಮೆPM Modiಪ್ರತಿಕ್ರಿಯೆresignsreactionsಆರ್ ಬಿಐ ಗೌರ್ನರ್ಉರ್ಜಿತ್ ಪಟೇಲ್RBI Governor Urjit Patel
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


