ಅಧಿವೇಶನಕ್ಕೆ ಮುನ್ನ ಮೋದಿ ಸರ್ಕಾರಕ್ಕೆ ಆಘಾತ: ಸಚಿವ ಸ್ಥಾನಕ್ಕೆ ಉಪೇಂದ್ರ ಕುಶ್ವಾಹ ರಾಜೀನಾಮೆ
ರಾಷ್ಟ್ರೀಯ ಲೋಕಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಕೇಂದ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Published On :
ನವದೆಹಲಿ: ರಾಷ್ಟ್ರೀಯ ಲೋಕಶಕ್ತಿ ಪಕ್ಷದ ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಕೇಂದ್ರ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಕ್ಕೆ ಒಂದು ದಿನವಷ್ಟೇ ಬಾಕಿ ಇದ್ದಂತೆ ಸಚಿವರು ರಾಜೀನಾಮೆ ಸಲ್ಲಿಸಿರುವುದು ಎನ್ ಡಿಎ ಸರ್ಕಾರಕ್ಕೆ ದೊಡ್ಡ ಆಘಾತವಾಗಿದೆ.
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ರಾಜ್ಯ ಸಚಿವರಾಗಿದ್ದ ಕುಶ್ವಾಹ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಸೀಟು ಹಂಚಿಕೆ ಸಂಬಂಧ ಅಸಮಾಧಾನಗೊಂಡಿದ್ದರು. ಇದೀಗ ಎನ್ ಡಿಎ ಮೈತ್ರಿಕೂಟ ತೊರೆಯುವ ನಿರ್ಧಾರಕ್ಕೆ ಬಂದಿರುವ ಕುಶ್ವಾಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಹಾರದಲ್ಲಿ ಒಟ್ಟಾರೆ 40 ಲೋಕಸಭೆ ಸ್ಥಾನಗಳಿದ್ದು ಈ ಪೈಕಿ ಬಿಜೆಪಿ ಮತ್ತು ಜೆಡಿ (ಯು) ಎರಡು ಪಕ್ಷಗಳು ತಲಾ 17 ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ಒಪ್ಪಂದವಾಗಿದೆ. ಇದು ಕುಶ್ವಾಹ ಅವರಿಗೆ ಅಸಮಾಧಾನ ತಂದಿದೆ ಎನ್ನಲಾಗಿದೆ.
ಇನ್ನು ತಾತ್ಕಾಲಿಕವಾಗಿ ಮಾಡಿಕೊಳ್ಳಲಾಗಿರುವ ಒಪ್ಪಂದದಂತೆ ಆರ್ಎಲ್ಎಸ್ಪಿಗೆ ಎರಡು ಸ್ಥಾನಗಳನ್ನು ಮಾತ್ರ ನೀಡಲಾಗಿದ್ದು ಇದು ಆ ಪಕ್ಷ ಕಳೆದ ಸಾಲಿನಲ್ಲಿ ಗೆದ್ದಿರುವ ಸ್ಥಾನಕ್ಕಿಂತಲೂ ಒಂದು ಸ್ಥಾನ ಕಡಿಮೆ ಇದೆ. ಕುಶ್ವಾಹ ಅವರು ಕಾರಕತ್ ಕ್ಷೇತ್ರದಿಂದ ಗೆದ್ದು ಸಂಸದರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
NDAUpendra Kushwahaಎನ್ ಡಿಎ2019 ಲೋಕಸಭೆ ಚುನಾವಣೆRashtriya Lok Samta Party2019 Parliament Electionsರಾಷ್ಟ್ರೀಯ ಲೋಕಶಕ್ತಿ ಪಕ್ಷಉಪೇಂದ್ರ ಕುಶ್ವಾಹ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


