ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಂಪುಟಕ್ಕೂ ಅತಿದೊಡ್ಡ ಹಾನಿ- ಯಶವಂತ್ ಸಿನ್ಹಾ
ಕೇಂದ್ರ ಸಂಪುಟ ಸೇರಿದಂತೆ ದೇಶದಲ್ಲಿನ ಪ್ರಮುಖ ಸಂಸ್ಥೆಗಳನ್ನು ನರೇಂದ್ರ ಮೋದಿ ಸರ್ಕಾರ ನಾಶಪಡಿಸುತ್ತಿದೆ ಎಂದು ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಆರೋಪಿಸಿದ್ದಾರೆ.

ಕೊಲ್ಕತ್ತಾ: ಕೇಂದ್ರ ಸಂಪುಟ ಸೇರಿದಂತೆ ದೇಶದಲ್ಲಿನ ಪ್ರಮುಖ ಸಂಸ್ಥೆಗಳನ್ನು ನರೇಂದ್ರ ಮೋದಿ ಸರ್ಕಾರ ನಾಶಪಡಿಸುತ್ತಿದೆ ಎಂದು ಮಾಜಿ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಆಯೋಜಿಸಿದ್ದ ಐಡಿಯಾ ಆಫ್ ಬೆಂಗಾಲ್ ಟಾಕ್ ಶೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಮುಖ ಮಸೂದೆಯನ್ನು ಅಂಗೀಕರಿಸುವ ಸಮಯದಲ್ಲಿ ರಾಜ್ಯಸಭೆಯನ್ನು "ಹಾಳುಮಾಡಲು ನರೇಂದ್ರ ಮೋದಿ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಫೆಲ್ ಯುದ್ಧ ವಿಮಾನ ಒಪ್ಪಂದವಾಗಿರಬಹುದು ಅಥವಾ ನೋಟ್ ಅಮಾನ್ಯತೆ ನಂತಹ ಅನೇಕ ಪ್ರಮುಖ ನಿರ್ಧಾರಗಳನ್ನು ಸಂಪುಟಕ್ಕೆ ಮಾಹಿತಿ ನೀಡದೆ ತೆಗೆದುಕೊಳ್ಳಲಾಗುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಅವಧಿಯಲ್ಲಿ ಯಾರೂಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆ ನಿರ್ವಹಿಸಿದ್ದರು ಎಂದು ಪ್ರಶ್ನಿಸಿದರು.
ರಾಜ್ಯಸಭೆಯಲ್ಲಿ ಬಿಜೆಪಿ ಬಹುಮತವಿಲ್ಲ ಹೊಂದಿಲ್ಲದಿರುವುದರಿಂದ ಪ್ರಮುಖ ಮಸೂದೆ ಅಂಗೀಕರಿಸುವ ಸಮಯದಲ್ಲಿ ರಾಜ್ಯಸಭೆಯನ್ನು "ಹಾಳುಮಾಡಲು ನರೇಂದ್ರ ಮೋದಿ ಯತ್ನಿಸುತ್ತಿದ್ದು, ಸಂಸತ್ತಿಗೆ ಎರಡನೇ ಹಾನಿಯಾಗಿದೆ ಎಂದು ಸಿನ್ಹಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


