ಪಂಚ ರಾಜ್ಯ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ!
ತೀವ್ರ ಕುತೂಹಲ ಕೆರಳಿಸಿರುವ ಮತ್ತು ಪ್ರಧಾನಿ ಮೋದಿ ವರ್ಸಸ್ ಕಾಂಗ್ರೆಸ್ ನೇತೃತ್ವದ ಮಹಾ ಘಟ್ ಬಂಧನ್ ನಡುವಿನ ಸಮರವೆಂದೇ ಬಣ್ಣಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದೆ.

Published On :
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಮತ್ತು ಪ್ರಧಾನಿ ಮೋದಿ ವರ್ಸಸ್ ಕಾಂಗ್ರೆಸ್ ನೇತೃತ್ವದ ಮಹಾ ಘಟ್ ಬಂಧನ್ ನಡುವಿನ ಸಮರವೆಂದೇ ಬಣ್ಣಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆಯ ಮತಎಣಿಕೆ ಕಾರ್ಯ ಆರಂಭವಾಗಿದೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಈ ಚುನಾವಣೆ ಅತ್ಯಂತ ಪ್ರಮುಖವಾಗಿದ್ದು, ಅಧಿಕಾರ ಉಳಿಸಿಕೊಳ್ಳುವ ಅನಿವಾರ್ಯತೆಯಲ್ಲಿ ಬಿಜೆಪಿ ಇದ್ದರೆ, ಅಧಿಕಾರ ಪಡೆದು ಚೇತರಿಸಿಕೊಳ್ಳುವ ಮೂಲಕ ವ್ಯಾಪಕವಾಗಿ ಬೆಳೆದಿರುವ ಬಿಜೆಪಿ ವಿರುದ್ಧ ಹೋರಾಡುವ ತವಕದಲ್ಲಿದೆ ಕಾಂಗ್ರೆಸ್.
ಸದ್ಯ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, ಮಿಜೋರಾಂನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ತೆಲಂಗಾಣದಲ್ಲಿ ಟಿಆರ್ಎಸ್ ಅಧಿಕಾರದಲ್ಲಿದ್ದು, ಕಳೆದ ವಾರ ಪ್ರಕಟವಾಗಿದ್ದ ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಲಂಗಾಣದಲ್ಲಿ ಮತ್ತೆ ಟಿಆರ್ ಎಸ್ ಬಹುಮತ ಪಡೆಯುವ ಸಾಧ್ಯತೆ ಕುರಿತು ವರದಿಯಾಗಿತ್ತು.
ಕಳೆದ ವಾರ ಪ್ರಕಟವಾದ ಮತಗಟ್ಟೆ ಸಮೀಕ್ಷೆಗಳ ಅನ್ವಯ ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲೂ ಪ್ರಬಲ ಪೈಪೋಟಿ ನೀಡುತ್ತಿದೆ. ರಾಜಸ್ಥಾನದಲ್ಲಿ ಅಧಿಕಾರ ರಚಿಸುವ ಮುನ್ಸೂಚನೆಗಳು ಸಿಕ್ಕಿವೆ. ಮಧ್ಯಪ್ರದೇಶದಲ್ಲಿ ತುರುಸಿನ ಪೈಪೋಟಿ ಏರ್ಪಟ್ಟಿದ್ದು, ಏನಾಗಲಿದೆ ಎಂಬುದನ್ನು ಇನ್ನಷ್ಟೇ ನಿರೀಕ್ಷಿಸಬೇಕು. ಛತ್ತೀಸ್ ಗಢದಲ್ಲಿ ಪೈಪೋಟಿ ನಡುವೆಯೂ ಬಿಜೆಪಿ ಗೆದ್ದು ಬರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಎರಡು ದೊಡ್ಡ ರಾಜ್ಯಗಳನ್ನು ಗೆದ್ದುಕೊಳ್ಳುವ ಉಮೇದಿನಲ್ಲಿರುವ ಕಾಂಗ್ರೆಸ್, ಈಶಾನ್ಯ ರಾಜ್ಯಗಳ ತನ್ನ ಕಡೇ ಕ್ಯಾಂಪ್ ಮಿಜೋರಾಂ ಅನ್ನೇ ಕಳೆದುಕೊಳ್ಳುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiPM Modiಪ್ರಧಾನಿ ಮೋದಿRahul Gandhiರಾಹುಲ್ ಗಾಂಧಿಚುನಾವಣಾ ಫಲಿತಾಂಶPoll Results5 State Election5 ರಾಜ್ಯ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


