ರಾಜಸ್ತಾನದಲ್ಲಿ ಮುದುಡಿದ 'ತಾವರೆ': ಸರ್ಕಾರ ರಚಿಸಲು ಕಾಂಗ್ರೆಸ್ ಸನ್ನದ್ಧ!
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತ ...

Published On :
ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ರಾಜಸ್ತಾನ ಚುನಾವಣೆಯಲ್ಲಿ ಪಕ್ಷದ ಉತ್ತಮ ಸಾಧನೆಗೆ ರಾಹುಲ್ ಗಾಂಧಿ ಕಾರಣ ಎಂಗು ಹೊಗಳಿರುವ ಗೆಹ್ಲೋಟ್, ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ರಾಹುಲ್ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಸ್ತಾನದಲ್ಲಿ ಪಕ್ಷಕ್ಕೆ ಸ್ಪಷ್ಚ ಬಹುಮತ ದೊರೆತು ಸರ್ಕಾರ ರಚಿಸಲಿದ್ದೇವೆ. ಸಿಎಂ ಯಾರು ಎಂಬ ಬಗ್ಗೆ ಪಕ್ಷದ ಹೈಕಮಾಂಡ್ ಮತ್ತು ಶಾಸಕರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ,
ಮೋದಿ ಅವರ ಗ್ರಾಫ್ ಕೆಳಗೆ ಬಂದಿದ್ದು ರಾಹುಲ್ ಗಾಂಧಿ ಪ್ರಮುಖ ವಿಷಯಗಳ ಬಗ್ಗೆ ದನಿ ಎತ್ತಿರುವುದು ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್bjpಬಿಜೆಪಿಚುನಾವಣಾ ಫಲಿತಾಂಶರಾಜಸ್ತಾನRajastanPoll ResultsAshok Gehlotಅಶೋಕ್ ಗೆಹ್ಲೋಟ್ಪಂಚ ರಾಜ್ಯ ಚುನಾವಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


