ಈ ರೀತಿಯ ಫಲಿತಾಂಶ ನಿರೀಕ್ಷಿಸಿರಲಿಲ್ಲ: ಮಿಜೋರಾಂ ನಿರ್ಗಮಿತ ಮುಖ್ಯಮಂತ್ರಿ
ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಮಿಜೋ ರಾಷ್ಟ್ರೀಯ ಫ್ರಂಟ್ -ಎಂಎನ್ ಎಫ್ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೀನಾಯ ಸೋಲಿಗೆ ಶರಣಾಗಿದೆ.

ಐಜ್ವಾಲ್ : ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಮಿಜೋ ರಾಷ್ಟ್ರೀಯ ಫ್ರಂಟ್ -ಎಂಎನ್ ಎಫ್ 26 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೀನಾಯ ಸೋಲಿಗೆ ಶರಣಾಗಿದೆ.
ನಿರ್ಗಮಿತ ಮುಖ್ಯಮಂತ್ರಿ ಲಾಲ್ ಥಾನಾವಾಲ ಸ್ಪರ್ಧಿಸಿದ್ದ ಎರಡು ಕ್ಷೇತ್ರಗಳಲ್ಲಿ ಸೋತಿದ್ದಾರೆ. ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಲಾಲ್ ಥಾನಾವಾಲ ದಕ್ಷಿಣ ಚಂಪೈ ಹಾಗೂ ಸೇರ್ಫಿಪ್ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು. ಆದರೆ, ಎರಡು ಕಡೆಗಳಲ್ಲಿಯೂ ಸೋತಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.
ರಾಜ್ಯಪಾಲರಿಗೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಾಲ್ ಥಾನಾವಾಲ, ಚುನಾವಣಾ ಫಲಿತಾಂಶದಿಂದ ತೀವ್ರ ನಿರಾಶೆಯಾಗಿದೆ. ಇದನ್ನು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎಂಎನ್ ಎಫ್ ಅಧ್ಯಕ್ಷ ಜೊರಾಮ್ ತಂಗಾ ನೇತೃತ್ವದ ನಿಯೋಗ ರಾಜ್ಯಪಾಲ ಕುಮ್ಮಾನಾಮ್ ರಾಜಶೇಖರನ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


