3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ; ದೇಶಾದ್ಯಂತ ಈ ಟ್ರೆಂಡ್ ಮುಂದುವರೆಯಲಿದೆ: ಸಚಿನ್ ಪೈಲಟ್
2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ....

Published On :
ಜೈಪುರ್: 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ.
ಇನ್ನು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲೆಟ್ ಅವರು, ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.
ರಾಜಸ್ಥಾನ, ಛತ್ತೀಸ್ ಗಢ ಮತ್ತು ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಮುಂದೆ ದೇಶಾದ್ಯಂತ ಈ ಗೆಲುವಿನ ಟ್ರೆಂಡ್ ಮುಂದುವರೆಯಲಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿನ್ ಪೈಲಟ್ ಅವರು ತಿಳಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿನ್, ರಾಹುಲ್ ಗಾಂಧಿ ಮತ್ತು ಪಕ್ಷದ ಶಾಸಕರು ಅದನ್ನು ನಿರ್ಧರಿಸಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚುನಾವಣಾ ಫಲಿತಾಂಶSachin PilotPoll Resultsಸಚಿನ್ ಪೈಲೆಟ್Headed for victory in three states3 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


