ದೇಶ

ಇಂದಿನಿಂದ ಸಂಸತ್ ಅಧಿವೇಶನ: ತಲಾಖ್ ಸೇರಿದಂತೆ ಮಹತ್ವದ ಮಸೂದೆ ಅಂಗೀಕಾರಕ್ಕೆ ಸರ್ಕಾರ ಸಜ್ಜು

ಸಂಸತ್ತಿನ ಚಳಿಗಾಲ ಅಧಿವೇಶನ ಮಂಗಳವಾರದಿಂದ ಆರಂಭವಾಗಲಿದ್ದು, ಅಧಿವೇಶನದಲ್ಲಿ ನೆನೆಗುದಿಗೆ ಬಿದ್ದಿರುವ ತ್ರಿವಳಿ ತಲಾಖ್ ಸೇರಿದಂತೆ ಇನ್ನಿತರೆ ಮಹತ್ವದ ವಿಧೇಯಕಗಳಿಗೆ ಅಂಗೀಕಾರ ಪಡೆಯಲು ಸರ್ಕಾರ ಸಜ್ಜಾಗಿದೆ...

ಇಂದಿನಿಂದ ಸಂಸತ್ ಅಧಿವೇಶನ: ತಲಾಖ್ ಸೇರಿದಂತೆ ಮಹತ್ವದ ಮಸೂದೆ ಅಂಗೀಕಾರಕ್ಕೆ ಸರ್ಕಾರ ಸಜ್ಜು
ಸಂಗ್ರಹ ಚಿತ್ರ
Published On :
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಮಂಗಳವಾರದಿಂದ ಆರಂಭವಾಗಲಿದ್ದು, ಅಧಿವೇಶನದಲ್ಲಿ ನೆನೆಗುದಿಗೆ ಬಿದ್ದಿರುವ ತ್ರಿವಳಿ ತಲಾಖ್ ಸೇರಿದಂತೆ ಇನ್ನಿತರೆ ಮಹತ್ವದ ವಿಧೇಯಕಗಳಿಗೆ ಅಂಗೀಕಾರ ಪಡೆಯಲು ಸರ್ಕಾರ ಸಜ್ಜಾಗಿದೆ. 
ಅಧಿವೇಶನದಲ್ಲಿ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ರಾಜೀನಾಮೆ, ರಫೇಲ್ ಯುದ್ಧ ವಿಮಾನ ಖರೀದಿ ಹಗರಣ, ಸಿಬಿಐ ಉನ್ನತಾಧಿಕಾರಿಗಳ ಕಚ್ಚಾಟ, ಕೇಂದ್ರದ ಮಾಜಿ ಸಚಿವ ಎಂ.ಜೆ.ಅಕ್ಬರ್ ವಿರುದ್ದ ಕೇಳಿಬಂದ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಿದ್ಧಗೊಂಡಿವೆ. 
ಇನ್ನು ವಿಜಯ್ ಮಲ್ಯ ಹಾಗೂ ಕ್ರಿಸ್ಟಿಯನ್ ಮಿಶೆಲ್ ಗಡೀಪಾರು ವಿಷಯಗಳನ್ನು ನಗದೀಕರಣ ಮಾಡಿಕೊಂಡು ತಿರುಗೇಟು ನೀಡಲು ಸರ್ಕಾರ ಸಜ್ಜಾಗಿದೆ. 
ಡಿ.11ರಿಂದ ಜ.8ರವರೆಗೆ ಅಧಿವೇಶನ ನಡೆಯಲಿದ್ದು, ಚಳಿಗಾಲದ ಮೊದಲ ದಿನವಾದ ಇಂದು ಕಲಾಪದಲ್ಲಿ ಇತ್ತೀಚೆಗಷ್ಟೇ ಅಗಲಿದ ಬಿಜೆಪಿ ನಾಯಕರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಕೇಂದ್ರ ಸಚಿವರಾಗಿದ್ದ ಅನಂತ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ. ಅಲ್ಲದೆ ಅದೇ ದಿನವೇ ಲೋಕಸಭೆ ಚುನಾವಣೆಯ ಸೆಮೆಫೈನಲ್ ಎಂದೇ ಹೇಳಲಾಗುತ್ತಿರುವ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಕಲಾಪದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. 
ಈ ಕಲಾಪದಲ್ಲಿ ತ್ರಿವಳಿ ತಲಾಖ್ ಆಚರಣೆ ಮುಂದುವರೆಸಿದರೆ ಶಿಕ್ಷೆ ವಿಧಿಸುವ ಮಸೂದೆ, ಕಂಪನಿಗಳ ಕಾಯ್ದೆ ತಿದ್ದುಪಡಿ ಮಸೂದೆ, ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.