ರಾಮ ಮಂದಿರ, ಪ್ರತಿಮೆ, ಹೆಸರು ಬದಲಾವಣೆ ಪಕ್ಷದ ಸೋಲಿಗೆ ಕಾರಣ: ಬಿಜೆಪಿ ಸಂಸದ
ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ....

Published On :
ಮುಂಬೈ: ರಾಮ ಮಂದಿರ ನಿರ್ಮಾಣ ವಿಚಾರ, ಪ್ರತಿಮೆ ಸ್ಥಾಪನೆ ಹಾಗೂ ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಗಮನ ಹರಿಸಿದ್ದೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸಂಜಯ್ ಕಾಕಡೆ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ. ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಐದು ರಾಜ್ಯಗಳಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ.
ಫಲಿತಾಂಶದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಂಜಯ್ ಕಾಕಡೆ ಅವರು, ರಾಜಸ್ಥಾನ ಮತ್ತು ಛತ್ತೀಸ್ ಗಢದ ಸೋಲು ನಿರೀಕ್ಷಿತ. ಆದರೆ ಮಧ್ಯ ಪ್ರದೇಶದಲ್ಲಿ ಹಿನ್ನಡೆ ಅನುಭವಿಸಿರುವುದು ಅಚ್ಚರಿ ಮೂಡಿಸಿದೆ. ನಾವು ಅಭಿವೃದ್ಧಿ ವಿಚಾರ ಮರೆತು ರಾಮ ಮಂದಿರ ನಿರ್ಮಾಣಕ್ಕೆ, ಪ್ರತಿಮೆ ನಿರ್ಮಾಣಕ್ಕೆ ಮತ್ತು ಹಲವು ನಗರಗಳ ಹೆಸರು ಬದಲಾವಣೆಗೆ ಹೆಚ್ಚು ಆದ್ಯತೆ ನೀಡಿದ್ದೇ ಈ ಸೋಲಿಗೆ ಕಾರಣ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


