ದೇಶ

10 ದಿನಗಳೊಳಗೆ ಕಾಂಗ್ರೆಸ್ ರೈತರ ಸಾಲ ಮನ್ನಾ ಮಾಡಬೇಕು- ಚೌಹ್ಹಾಣ್ ಎಚ್ಚರಿಕೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಎಚ್ಚರಿಕೆ ನೀಡಿದ್ದಾರೆ.

10 ದಿನಗಳೊಳಗೆ ಕಾಂಗ್ರೆಸ್  ರೈತರ ಸಾಲ ಮನ್ನಾ ಮಾಡಬೇಕು- ಚೌಹ್ಹಾಣ್ ಎಚ್ಚರಿಕೆ
ಶಿವರಾಜ್ ಸಿಂಗ್ ಚೌಹ್ಹಾಣ್
Published On :

ಭೂಪಾಲ್:  ಮಧ್ಯಪ್ರದೇಶದಲ್ಲಿ 109 ಕ್ಷೇತ್ರಗಳಲ್ಲಿ  ಗೆಲುವು ಸಾಧಿಸಿರುವ ಬಿಜೆಪಿ ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ನಾವು ಸುಮ್ಮನೆ ಕುಳಿತುಕೊಳ್ಳಲು 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿಲ್ಲ. 109 ಶಾಸಕರನ್ನು ಹೊಂದಿದ್ದು, ರಚನಾತ್ಮಕ ಹಾಗೂ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.

10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.  ಈ ಅವಧಿಯಲ್ಲಿ ಸಾಲ ಮನ್ನಾ ಮಾಡದಿದ್ದರೆ  ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಬದ್ಧತೆಯನ್ನು ಅವರು ಪೂರ್ಣಗೊಳಿಸಿದ್ದಾರೆ ಎಂಬ  ಸಂಪೂರ್ಣ ನಂಬಿಕೆ ಹೊಂದಿದ್ದೇನೆ ಎಂದರು.

ತಮ್ಮ ಅಧಿಕಾರವಧಿಯಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳುವ ಮೂಲಕ ಮಧ್ಯಪ್ರದೇಶದ ಅಭಿವೃದ್ದಿಗಾಗಿ ಶ್ರಮಿಸಲಾಗಿದೆ. ಅಧಿಕಾರಕ್ಕೆ ಬರುವ ಹೊಸ ಸರ್ಕಾರ ಕೂಡಾ ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗಬೇಕು. 13 ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ  ಶಿವರಾಜ್ ಸಿಂಗ್ ಚೌಹ್ಹಾಣ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.