ಪಕ್ಷೇತರರ ಬೆಂಬಲ ಪಡೆದು ರಾಜಸ್ತಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ: ಅಶೋಕ್ ಗೆಹ್ಲೋಟ್
ರಾಜಸ್ತಾನದಲ್ಲಿ ಮ್ಯಾಜಿಕ್ ನಂಬರ್ ಮಿಸ್ ಮಾಡಿಕೊಂಡಿರುವ ಕಾಂಗ್ರೆಸ್ ಬುಧವಾರ ರಾಹುಲ್ ಗಾಂಧಿ ಅವರ ಜೊತೆ ಆರು ಪಕ್ಷೇತರರ ಜೊತೆ ಸಭೆ ನಡೆಸಿದ್ದಾರೆ.

Published On :
ಜೈಪುರ: ರಾಜಸ್ತಾನದಲ್ಲಿ ಮ್ಯಾಜಿಕ್ ನಂಬರ್ ಮಿಸ್ ಮಾಡಿಕೊಂಡಿರುವ ಕಾಂಗ್ರೆಸ್ ಬುಧವಾರ ರಾಹುಲ್ ಗಾಂಧಿ ಅವರ ಜೊತೆ ಆರು ಪಕ್ಷೇತರರ ಜೊತೆ ಸಭೆ ನಡೆಸಿದ್ದಾರೆ.
ರಾಜಸ್ತಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಜೈಪುರ ನಿವಾಸದಲ್ಲಿ ಸಭೆ ನಡೆಸಲಾಗಿತ್ತು. ಇಂದು ಸಂಜೆ ಒಳಗೆ ಅಧಿಕೃತವಾಗಿ ಪ್ರಕಟಿಸಲಾಗುವುದು, ಪ್ರತಿ ಶಾಸಕರ ಜೊತೆಗೆ ನಮಗೆ ಉತ್ತಮ ಬಾಂಧವ್ಯವಿದೆ, ಹಿಗಾಗಿ ಪ್ರತಿಯೊಬ್ಬರನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಹೈಕಮಾಂಡ್ ನಿರ್ದೇಶನದಂತೆ ಮುಂದಿನ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ 199 ಕ್ಷೇತ್ರಗಳಲ್ಲಿ ಕಾಂಗ್ರೆಸ್ 99 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ, ಬಿಜೆಪಿ 73 ಸ್ಥಾನ ಗಳಿಸಿದೆ. ಹೀಗಾಗಿ ಪಕ್ಷೇತರರ ಬೆಂಬಲ ಪಡೆದು ಸ್ವತಂತ್ರ್ಯವಾಗಿ ಸರ್ಕಾರ ರಚಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಸರ್ಕಾರGovernmentರಾಜಸ್ತಾನRajastanPoll ResultsAshok Gehlotಅಶೋಕ್ ಗೆಹ್ಲೋಟ್ಪಂಚರಾಜ್ಯಗಳ ಫಲಿತಾಂಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


