ತೆಲಂಗಾಣ: ಸಿಎಂ ಆಗಿ ಗುರುವಾರ ಕೆಸಿಆರ್ ಪ್ರಮಾಣ ವಚನ ಸ್ವೀಕಾರ
ತೆಲಂಗಾಣ ರಾಜ್ಯದ ನೂತನ ಸಿಎಂ ಆಗಿ ಕೆ ಚಂದ್ರಶೇಖರ ರಾವ್ ಅವರು ಇದೇ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Published On :
ಹೈದರಾಬಾದ್: ತೆಲಂಗಾಣ ರಾಜ್ಯದ ನೂತನ ಸಿಎಂ ಆಗಿ ಕೆ ಚಂದ್ರಶೇಖರ ರಾವ್ ಅವರು ಇದೇ ಗುರುವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಟಿಆರ್ ಎಸ್ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಇದೇ ಗುರುವಾರ ಟಿಆರ್ ಎಸ್ ಅಧಿನಾಯಕ ಕೆ ಚಂದ್ರಶೇಖರ ರಾವ್ ಅವರು 2ನೇ ಬಾರಿಗೆ ತೆಲಂಗಾಣ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೆಸಿಆರ್ ನೇತೃತ್ವದ ಟಿಆರ್ಎಸ್ 88 ಸ್ಥಾನಗಳನ್ನು ಗೆದ್ದು ಬೀಗಿತ್ತು.
ಮಂಗಳವಾರ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಟಿಆರ್ ಎಸ್ ಪ್ರಚಂಡ ಜಯ ಸಾಧಿಸಿತ್ತು. ಕೆಸಿಆರ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅವರು ಗುರುವಾರಕ್ಕೆ ಪ್ರಮಾಣವಚನವನ್ನು ಮುಂದೂಡಿದ್ದಾರೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್KCRಕೆಸಿಆರ್TRSಟಿಆರ್ ಎಸ್Poll Resultsತೆಲಂಗಾಣ ವಿಧಾನಸಭೆ ಚುನಾವಣೆ 2018Telangana Assembly Election 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


