ಪಪ್ಪು ಈಗ 'ಪರಮ ಪೂಜ್ಯ' - ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಾಧನೆ ಬಗ್ಗೆ ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ ಕೊಂಡಾಡಿದ್ದಾರೆ.

ಮುಂಬೈ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಾಧನೆ ಬಗ್ಗೆ ಎಂಎನ್ ಎಸ್ ಮುಖಂಡ ರಾಜ್ ಠಾಕ್ರೆ ಕೊಂಡಾಡಿದ್ದಾರೆ.
ಗುಜರಾತಿನಲ್ಲಿ ಏಕಾಂಗಿಯಾಗಿ ಕಾಂಗ್ರೆಸ್ ಪಕ್ಷದ ವರ್ಚಸ್ಸು ವೃದ್ದಿಸಿದ್ದ ರಾಹುಲ್ ಗಾಂಧಿ, ಕರ್ನಾಟಕದಲ್ಲಿಯೂ ಮೈತ್ರಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಪಂಚ ರಾಜ್ಯಗಳ ಚುನಾವಣೆಯಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ.ಪುಪ್ಪು ಈಗ ಪರಮ ಪೂಜ್ಯರಾಗಿದ್ದಾರೆ ಎಂದು ರಾಜ್ ಠಾಕ್ರೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಮುಂದಿನ ದಿನಗಳಲ್ಲಿ ರಾಹುಲ್ ಗಾಂಧಿ ನಾಯಕತ್ವವನ್ನು ರಾಷ್ಟ್ರೀಯ ಮಟ್ಟದಲ್ಲಿ ಸ್ವೀಕರಿಸಲಾಗುತ್ತದೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಸಂಸದರೊಬ್ಬರು ರಾಹುಲ್ ಗಾಂಧಿ ಅವರನ್ನು ‘ಪಪ್ಪು’ ಎಂದು ವ್ಯಂಗ್ಯವಾಡಿದ್ದರು. ಇದು ವಿವಾದಕ್ಕೂ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


