ದೇಶ

ಕಾವೇರಿ ವಿವಾದ ಕುರಿತು ತ.ನಾಡಿನಿಂದ ತೀವ್ರ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ

ಕಾವೇರಿ ನದಿ ನೀರು ವಿವಾರ ಕುರಿತಂತೆ ತಮಿಳುನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷದ ನಾಯಕರು ಸದನದ ಬಾವಿಗೆ ಇಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಬುಧವಾರ...

ಕಾವೇರಿ ವಿವಾದ ಕುರಿತು ತ.ನಾಡಿನಿಂದ ತೀವ್ರ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ
ಕಾವೇರಿ ವಿವಾದ ಕುರಿತು ತ.ನಾಡಿನಿಂದ ತೀವ್ರ ಪ್ರತಿಭಟನೆ: ರಾಜ್ಯಸಭಾ ಕಲಾಪ ಮುಂದೂಡಿಕೆ
Published On :
ನವದೆಹಲಿ: ಕಾವೇರಿ ನದಿ ನೀರು ವಿವಾರ ಕುರಿತಂತೆ ತಮಿಳುನಾಡಿನ ಎರಡು ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷದ ನಾಯಕರು ಸದನದ ಬಾವಿಗೆ ಇಳಿದು ತೀವ್ರವಾಗಿ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಬುಧವಾರ ರಾಜ್ಯಸಭಾ ಕಲಾಪವನ್ನು ಬುಧವಾರ ಮಧ್ಯಾಹ್ನಕ್ಕೆ ಮುಂದೂಡಲಾಗಿದೆ. 
ಅಧಿವೇಶನ ಆರಂಭವಾಗುತ್ತಿದ್ದಂತೆಯೇ ಕೆಲ ಎಐಎಡಿಎಂಕೆ ಸದಸ್ಯರು ಸದನದ ಬಾವಿಗಿಳಿದು ಕಾವೇರಿ ವಿವಾದ ಕುರಿತಂತೆ ಪ್ರತಿಭಟನೆ ನಡೆಸಲು ಆರಂಭಿಸಿದರು. ಕಾವೇರಿ ನದಿ ಪಾತ್ರದ ರೈತರ ಜೀವನವನ್ನು ರಕ್ಷಣೆ ಮಾಡುವಂತೆ ಕೆಲ ಬ್ಯಾನರ್ ಗಳನ್ನು ಪ್ರದರ್ಶಿಸಿದರು. 
ಇದೇ ವೇಳೆ ಡಿಎಂಕೆ ಸದಸ್ಯರೂ ಕೂಡ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದರು. ಈ ವೇಳೆ ಸಭಾಪತಿ ವೆಂಕಯ್ಯ ನಾಯ್ಡು ಅವರು, ತಮ್ಮ ಸ್ಥಾನಗಳಿಗೆ ಮರಳುವಂತೆ ಎಷ್ಟು ಬಾರಿ ಮನವಿ ಮಾಡಿಕೊಂಡರೂ, ಇದನ್ನು ಕೇಳದ ಸದಸ್ಯರು ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದರು. 
ಸಾಕಷ್ಟು ಪಕ್ಷಗಳಿಂದ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವಂತೆ ಮನವಿಗಳು ಬಂದಿವೆ. 267ರ ನಿಯಮದ ಪ್ರಕಾರ ಪ್ರಸ್ತುತ ಈ ವಿಚಾರವನ್ನು ಚರ್ಚೆ ನಡೆಸಲು ಸಾಧ್ಯವಿಲ್ಲ. ಎಲ್ಲಾ ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು. ನಾಯ್ಡು ಅವರ ಹೇಳಿಕೆ ಬಳಿಕವೂ ಎಐಎಡಿಎಂಕೆ ಹಾಗೂ ಡಿಎಂಕೆ ನಾಯಕರು ಪ್ರತಿಭಟನೆ ಮುಂದುವರೆಸಿದರು. 
ಮಂಗಳವಾರ ನಡೆದ ಅಧಿವೇಶನದ ವೇಳೆ ಹಾಜರಿದ್ದ ಕೆಲವರು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ತೋರಿಸಿದ್ದರು. ಜನರ ಭಾವನೆಗಳಿಗೆ ಗೌರವ ನೀಡಿ. ಈ ರೀತಿಯ ಪರಿಸ್ಥಿತಿ (ಪ್ರತಿಭಟನೆ)ಯಲ್ಲಿ ನಾನು ಏನನ್ನೂ ಹೇಳುವುದಿಲ್ಲ ಎಂದ ನಾಯ್ಡು ಅವರು, ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.