ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಬೆಂಬಲ: ಮಾಯಾವತಿ
ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಬಿಎಸ್ ಪಿ ...

Published On :
ನವದೆಹಲಿ: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಉದ್ದೇಶದಿಂದ ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಕಾಂಗ್ರೆಸ್ ನ ಹಲವು ನೀತಿಗಳಿಗೆ ನನ್ನ ಸಹಮತವಿಲ್ಲ, ಆದರೂ ಮಧ್ಯಪ್ರದೇಶದಲ್ಲಿ ಸರ್ಕಾರ ರಚಿಸಲು ನಾವು ಬೆಂಬಲ ನೀಡಲು ಒಪ್ಪಿರುವುದಾಗಿ ಹೇಳಿರುವ ಅವರು, ಅವಶ್ಯಕತೆ ಬಿದ್ದರೇ ರಾಜಸ್ತಾನದಲ್ಲೂ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಮಧ್ಯ ಪ್ರದೇಶದ 230 ವಿಧಾನಸಭೆ ಕ್ಷೇತ್ರಗಳ ಪೈಕಿ ಬಿಎಸ್ ಪಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಿಜೆಪಿ ವಿರುದ್ಧ ಬಂದಿದೆ ಎಂದು ಹೇಳಿರುವ ಮಾಯಾವತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


