ದೇಶ

ದಮನ್: ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ, ಮೂವರು ಕಾರ್ಮಿಕರು ಸಾವು

ಸಿಲ್ವಾಸ ಬಳಿ ಇರುವ ಉಕ್ಕಿನ ಕಾರ್ಖಾನೆಯೊಂದರಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು

ದಮನ್: ಉಕ್ಕಿನ ಕಾರ್ಖಾನೆಯಲ್ಲಿ ಸ್ಫೋಟ, ಮೂವರು ಕಾರ್ಮಿಕರು ಸಾವು
ಸಾಂದರ್ಭಿಕ ಚಿತ್ರ
Published On :
ದಮನ್: ಸಿಲ್ವಾಸ ಬಳಿ ಇರುವ ಉಕ್ಕಿನ ಕಾರ್ಖಾನೆಯೊಂದರಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತುಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶ ದಮನ್ ಮತ್ತು ದಿಯುದಿಂದ 54 ಕಿ.ಮೀ.ದೂರದಲ್ಲಿರುವ ಸಿಲ್ವಾಸ ಬಳಿ ಇರುವ ಶ್ರೀ ಕೃಷ್ಣ ಉಕ್ಕಿನ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಕೆಬಿ ಮಹಾಜನ್ ಅವರು ಹೇಳಿದ್ದಾರೆ.
ಕುಲುಮೆ ಸಮೀಪ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮಹಾಜನ್ ತಿಳಿಸಿದ್ದಾರೆ.
ಮೃತ ಕಾರ್ಮಿಕರನ್ನು ರಾಜಕುಮಾರ್ ಭಂಕರ್(26), ತಿಲಕರಾಮ್ ಯಾದವ್(18) ಮತ್ತು ವಿಜಯ್ ಭಂಕರ್(20) ಎಂದು ಗುರುತಿಸಲಾಗಿದೆ.
ಸ್ಫೋಟಕ್ಕೆ ನಿಕರ ಕಾರಣ ಇನ್ನು ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.