ದೇಶ

ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ
ಸಿಂದಿಯಾ, ರಾಹುಲ್, ಕಮಲ್ ನಾಥ್
Published On :
ನವದೆಹಲಿ: ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ  ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್  ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.
ಮಾತುಕತೆ ಬಳಿಕ ರಾಹುಲ್ ಗಾಂಧಿ ಸಾಹಿತಿ ಲಿಯೊ ಟಾಯ್ ಸ್ಟಾಯ್ ನ ಸಾಲುಗಳನ್ನು   ಒಳಗೊಂಡ ಟ್ವೀಟ್ ಮಾಡಿದ್ದು, ಕಮಲ್ ನಾಥ್ ಮತ್ತು ಸಿಂದಿಯಾ ಇರುವ ಪೋಟೋ ಪ್ರಕಟಿಸಿ, ತಾಳ್ಮೆ ಮತ್ತು ಸಮಯದ ಅತ್ಯಂತ ಬಲಿಷ್ಠ ಯೋಧರು  ಎಂದು ಬರೆದುಕೊಂಡಿದ್ದಾರೆ.
ಈ ಮಧ್ಯೆ  ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಜೋತ್ಯಿರಾದಿತ್ಯ  ಸಿಂಧಿಯಾ, ಇದು ಸ್ಪರ್ಧೆಯಲ್ಲ, ಇದು ಕುರ್ಚಿಗೆ ಸಂಬಂಧಿಸಿದಲ್ಲ, ಮಧ್ಯಪ್ರದೇಶದ ಜನರ ಸೇವೆಗಾಗಿ ಇಲ್ಲಿದ್ದೇವೆ. ಸದ್ಯ ಭೋಪಾಲ್ ನತ್ತ ಮರಳುತ್ತಿದ್ದು, ನಿರ್ಧಾರದ ಬಗ್ಗೆ ತಿಳಿಯಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.