ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರಗತಿಯಲ್ಲಿ ನೇಣು: ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಅಪರಾಧಿಗಳನ್ನು ಶೀಘ್ರಗತಿಯಲ್ಲಿ ಗಲ್ಲಿಗೇರಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್...

Published On :
ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಅಪರಾಧಿಗಳನ್ನು ಶೀಘ್ರಗತಿಯಲ್ಲಿ ಗಲ್ಲಿಗೇರಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ.
ನಿರ್ಭಯಾ ಪ್ರಕರಣದಲ್ಲಿ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಜನ ಅಪರಾಧಿಗಳಿಗೆ ಶೀಘ್ರಗತಿಯಲ್ಲಿ ನೇಣು ಶಿಕ್ಷೆ ಜಾರಿ ಮಾಡಜುವಂತೆ ಕೋರಿ ವಕೀಲ ಎ.ಎ. ಶ್ರೀವಾಸ್ತವ ಅವರು ಅರ್ಜಿ ಸಲ್ಲಿಸಿದ್ದರು.
ಶಿಕ್ಷೆ ಜಾರಿ ವಿಳಂಬದಿಂದಾಗಿ ದೇಶದಲ್ಲಿ ಅತ್ಯಾಚಾರಿಗಳಿಗೆ ಭಯವಿಲ್ಲದಂತಾಗಿದೆ. ಪತ್ರಿಕೆಗಳಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳ ಸುದ್ದಿ ಪ್ರಕಟಕೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ತಿಳಿಸಿದ್ದರು.
ಈ ಅರ್ಜಿಯನ್ನು ವಜಾಗೊಳಿಸರುವ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ಹಾಗೂ ದೀಪಕ್ ಗುಪ್ತ ಅವರಿದ್ದ ಪೀಠ, ಯಾವ ರೀತಿಯ ಮನವಿಯನ್ನು ನೀವು ಮಾಡುತ್ತಿದ್ದೀರಿ? ನ್ಯಾಯಾಲಯವನ್ನು ನೀವು ತಮಾಷೆ ಮಾಡುತ್ತಿದ್ದೀರಿ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


