ರಾಫೆಲ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಉಲ್ಲೇಖಿಸಿದ ಸಿಎಜಿ ವರದಿ ವಾಸ್ತವವಾಗಿ ಇಲ್ಲವೇ ಇಲ್ಲ: ರಾಹುಲ್ ಗಾಂಧಿ
ರಾಫೇಲ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು...

Published On :
ನವದೆಹಲಿ: ರಾಫೇಲ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಆಧಾರವನ್ನು ಪ್ರಶ್ನಿಸಿದ್ದಾರೆ.
ಅರ್ಜಿಗಳನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಸಿಎಜಿ ವರದಿಯನ್ನು ಉಲ್ಲೇಖಿಸಿದೆ, ಆದರೆ ಸುಪ್ರೀಂ ಕೋರ್ಟ್ ಉಲ್ಲೇಖಿಸಿರುವ ಸಿಎಜಿ ವರದಿ ವಾಸ್ತವವಾಗಿ ಇಲ್ಲವೇ ಇಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಸಾಲುಗಳನ್ನು ಓದಿದ ರಾಹುಲ್ ಗಾಂಧಿ, ಅದರಲ್ಲಿ ಸಿಎಜಿ ವರದಿ ಉಲ್ಲೇಖವಾಗಿರುವುದನ್ನು ಓದಿದ್ದರು. ತೀರ್ಪಿನಲ್ಲಿ ಸಿಎಜಿ ವರದಿಯನ್ನು ಉಲ್ಲೇಖಿಸಿದ್ದ ಕೋರ್ಟ್ "ರಾಫೆಲ್ ಯುದ್ಧ ವಿಮಾನದ ಖರೀದಿ ಮೊತ್ತದ ವಿವರಗಳನ್ನು ಸಿಎಜಿಗೆ ನೀಡಲಾಗಿತ್ತು, ಈ ಕುರಿತ ಸಿಎಜಿ ವರದಿಯನ್ನು ಸಾರ್ವಜನಿಕ ಲೆಕ್ಕ ಸಮಿತಿಯ (ಪಿಎಸಿ)ಯೂ ಪರಿಶೀಲನೆ ನಡೆಸಿದೆ, ಆದರೆ ಪರಿಷ್ಕರಿಸಲಾದ ಪ್ರತಿಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ ಎಂದು ಹೇಳಿತ್ತು.
ಸಿಎಜಿ ವರದಿ ಎಲ್ಲಿದೆ? ಅದು ಅಸ್ತಿತ್ವದಲ್ಲಿದ್ದರೆ ಅದನ್ನು ತೋರಿಸಿ, ಸಿಎಜಿ ವರದಿ ಎಲ್ಲಿದೆ ಎಂಬುದನ್ನು ಸರ್ಕಾರ ನಮಗೆ ವಿವರಿಸಬೇಕು, ಅದನ್ನು ಪಿಎಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ತೋರಿಸಿ ಎಂದು ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ. ಬಹುಶಃ ಪಿಎಸಿಗೆ ಪರ್ಯಾಯವಾಗಿ ಮತ್ತೊಂದು ಸಂಸ್ಥೆ ಅಸ್ತಿತ್ವದಲ್ಲಿರಬಹುದು, ಅದು ಫ್ರಾನ್ಸ್ ಸಂಸತ್ ನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರಬಹುದು, ಮೋದಿ ಜಿ ಪ್ರಧಾನಿ ಕಚೇರಿಯಲ್ಲಿ ತಮ್ಮದೇ ಆದ ಪಿಎಸಿ (ಸಾರ್ವಜನಿಕ ಲೆಕ್ಕ ಸಮಿತಿ)ಯನ್ನು ರಚಿಸಿರಬಹುದು ಎಂದಿರುವ ರಾಹುಲ್ ಗಾಂಧಿ ಜಂಟಿ ಸಂಸದೀಯ ಸಮಿತಿ ರಚನೆಗೆ ಆಗ್ರಹಿಸಿದ್ದು, ಕಾವಲುಗಾರ ಕಳ್ಳ ಎಂಬುದನ್ನು ದೇಶ ನಂಬುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಪ್ರಧಾನಿ ನರೇಂದ್ರ ಮೋದಿಸುಪ್ರೀಂ ಕೋರ್ಟ್PM ModiRahul Gandhiರಾಹುಲ್ ಗಾಂಧಿCAG reportಸಿಎಜಿ ವರದಿRafale dealರಾಫೆಲ್ ಒಪ್ಪಂದ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


