ದೇಶ

ಗೆಹ್ಲೋಟ್, ಪೈಲಟ್ ಜತೆ ಇರುವ ಫೋಟೋ ಟ್ವೀಟ್ ಮಾಡಿದ ರಾಹುಲ್, ಶೀಘ್ರದಲ್ಲೇ ರಾಜಸ್ಥಾನ ಸಿಎಂ ಹೆಸರು ಘೋಷಣೆ

ರಾಜಸ್ಥಾನದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಗಾದಿಗಾಗಿ....

ಗೆಹ್ಲೋಟ್, ಪೈಲಟ್ ಜತೆ ಇರುವ ಫೋಟೋ ಟ್ವೀಟ್ ಮಾಡಿದ ರಾಹುಲ್, ಶೀಘ್ರದಲ್ಲೇ ರಾಜಸ್ಥಾನ ಸಿಎಂ ಹೆಸರು ಘೋಷಣೆ
ಅಶೋಕ್ ಗೆಹ್ಲೋಟ್ - ಸಚಿನ್ ಪೈಲಟ್ - ರಾಹುಲ್ ಗಾಂಧಿ
Published On :
ನವದೆಹಲಿ: ರಾಜಸ್ಥಾನದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ ನಲ್ಲಿ ಈಗ ಮುಖ್ಯಮಂತ್ರಿ ಗಾದಿಗಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಸಂಜೆ ವೇಳೆಗೆ ರಾಜಸ್ಥಾನ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ರಾಹುಲ್ ಗಾಂಧಿ ಅವರು ರಾಜಸ್ಥಾನ ಮುಖ್ಯಮಂತ್ರಿ ರೇಸ್ ನಲ್ಲಿರುವ ಅಶೋಕ್​ ಗೆಹ್ಲೂಟ್ ಹಾಗೂ ಸಚಿನ್ ಪೈಲಟ್ ಅವರೊಂದಿಗೆ ನಿನ್ನೆಯಿಂದ ಹಲವು ಸುತ್ತಿನ ಮಾತುಕತೆ ನಡೆಸಿದ ಬಳಿಕ ಇಂದು ಆ ಇಬ್ಬರು ನಾಯಕರೊಂದಿಗೆ ಇರುವ ಫೋಟೋವೊಂದನ್ನು ಟ್ವೀಟ್ ಮಾಡಿ, 'ಯುನೈಟೆಡ್​ ಕಲರ್ಸ್​ ಆಫ್​ ರಾಜಸ್ಥಾನ್' ಎಂದು ಬರೆದಿದ್ದಾರೆ.
​ಸಿಎಂ ರೇಸ್ ನಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಪಟ್ಟು ಹಿಡಿದಿದ್ದ ಸಚಿನ್​ ಪೈಲಟ್​ ಅವರಿಗೆ ರಾಹುಲ್ ಗಾಂಧಿ​ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಆದರೆ, ಕಾಂಗ್ರೆಸ್​ ಹೈಕಮಾಂಡ್​ ನೀಡಿರುವ ಉಪ ಮುಖ್ಯಮಂತ್ರಿ ಸ್ಥಾನವನ್ನು ಸಚಿನ್ ಪೈಲಟ್​ ಸ್ವೀಕರಿಸುತ್ತಾರೋ ಇಲ್ಲವೋ ಎಂಬುದು ತಿಳಿದುಬಂದಿಲ್ಲ.
ರಾಜಸ್ಥಾನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ಕಾಂಗ್ರೆಸ್​ ಕಳೆದ 36 ಗಂಟೆಗಳಿಂದ ನಿರಂತರ ಸಭೆಗಳನ್ನು ನಡೆಸಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಪಾಲ್ಗೊಂಡಿದ್ದರು.
ಮಧ್ಯಪ್ರದೇಶದಲ್ಲೂ ಮುಖ್ಯಮಂತ್ರಿ ಗಾದಿಗೆ ಕಮಲನಾಥ್ ಮತ್ತು ಜ್ಯೋತಿರಾಧ್ಯ ಸಿಂದ್ಯಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ನೆನ್ನೆ ರಾಹುಲ್​ ಗಾಂಧಿ ಅವರು ಕಮಲನಾಥ್ ಅವರನ್ನು ಸಿಎಂ ಆಗಿ ಘೋಷಣೆ ಮಾಡಿದರು. ಘೋಷಣೆಗೂ ಮುನ್ನ ರಾಹುಲ್ ಇವರಿಬ್ಬರೊಂದಿಗೆ ಇರುವ ಫೋಟೋವನ್ನು ಟ್ವೀಟ್​ ಮಾಡಿದ್ದರು. ಅದರಂತೆ ಇಂದು ಕೂಡ ರಾಜಸ್ಥಾನದ ಇಬ್ಬರೂ ಮುಖಂಡರೊಂದಿಗೆ ನಿಂತಿರುವ ಫೋಟೋವನ್ನು ಟ್ವೀಟ್​ ಮಾಡುವ ಮೂಲಕ ಇಂದೇ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಮಾಡುವ ಸುಳಿವನ್ನು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.