ದೇಶ

ಪುಲ್ವಾಮಾ ಎನ್ ಕೌಂಟರ್: ಸೇನೆಯಿಂದ ಮೂವರು ಭಯೋತ್ಪಾದಕರು ಹತ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುಲ್ವಾಮಾ ಎನ್ ಕೌಂಟರ್: ಸೇನೆಯಿಂದ ಮೂವರು ಭಯೋತ್ಪಾದಕರು ಹತ
ಸಂಗ್ರಹ ಚಿತ್ರ
Published On :
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸೇನೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಿರ್ನೂ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಧಿಕಾರಿಗಳು ತುರ್ತು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಸೈನಿಕರು ಹತ್ಯೆಗೈದಿದ್ದಾರೆ.
ಅಂತೆಯೇ ಘಟನೆಯಲ್ಲಿ ಇಬ್ಬರು ನಾಗರಿಕರು ಕೂಡ ಸಾವನ್ನಪ್ಪಿದ್ದು, ಸಾವನ್ನಪ್ಪಿದ ನಾಗರಿಕರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಸೇನೆ ತಮ್ಮನ್ನು ಸುತ್ತುವರೆಯುತ್ತಿದ್ದಂತೆಯೇ ಭಯಭೀತ ಗೊಂಡ ಉಗ್ರರು ಏಕಾಏಕಿ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ. ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.