ದೇಶ

ಭೂಪೇಶ್ ಬಾಘೆಲ್ ಛತ್ತೀಸ್ ಗಡದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ

ಛತ್ತೀಸ್ ಗಢ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಘೆಲ್ ಅವರನ್ನು ಛತ್ತೀಸ್ ಗಡದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷ ಇಂದು ಆಯ್ಕೆಮಾಡಿದೆ.

ಭೂಪೇಶ್ ಬಾಘೆಲ್  ಛತ್ತೀಸ್ ಗಡದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
ಭೂಪೇಶ್ ಬಾಘೆಲ್ ಮತ್ತಿತರರು
Published On :

ರಾಯಪುರ: ಛತ್ತೀಸ್ ಗಢ ಕಾಂಗ್ರೆಸ್ ಅಧ್ಯಕ್ಷ ಭೂಪೇಶ್ ಬಾಘೆಲ್  ಅವರನ್ನು ಛತ್ತೀಸ್ ಗಡದ ನೂತನ ಮುಖ್ಯಮಂತ್ರಿಯಾಗಿ  ಕಾಂಗ್ರೆಸ್ ಪಕ್ಷ  ಇಂದು ಆಯ್ಕೆ ಮಾಡಿದೆ.

ರಾಯಪುರದಲ್ಲಿ ಇಂದು ನಡೆದ ಶಾಸಕಾಂಗ ಸಭೆಯ ನಂತರ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಲಾಯಿತು.  

ಛತ್ತೀಸ್ ಗಡದ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದ ಭೂಪೇಶ್ ಬಾಘೆಲ್ ಹಾಗೂ ಇತರ ಮೂವರೊಂದಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ದೆಹಲಿಯಲ್ಲಿ ನಿನ್ನೆ ಚರ್ಚೆ ನಡೆಸಿದ್ದರು.

ಭೂಪೇಶ್ ಬಾಘೆಲ್ ,ಟಿಎಸ್ ಸಿಂಗ್ ಡಿಯೊ, ತಮರಾಧ್ವಾಜ್ ಸಾಹು ಹಾಗೂ ಚರಣ್ ದಾಸ್ ಮೆಹಂತ ಅವರೊಂದಿಗೆ ತುಘಲಕ್ ಲೇನ್ ನಲ್ಲಿರುವ ನಿವಾಸದಲ್ಲಿ ರಾಹುಲ್ ಗಾಂಧಿ ಹಲವು ಸುತ್ತಿನ ಚರ್ಚೆ ನಡೆಸಿದ್ದರು.

ನಂತರ ಭೂಪೇಶ್ ಬಾಘೆಲ್ ಹಾಗೂ ಇತರ ಮುಖ್ಯಮಂತ್ರಿ ಆಕಾಂಕ್ಷಿ ಅಭ್ಯರ್ಥಿಗಳೊಂದಿರುವ ಪೋಟೋವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.
ರಾಯಪುರದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಛತ್ತೀಸ್ ಗಡದ ವೀಕ್ಷಕ ಮಲ್ಲಿಕಾರ್ಜುನ ಖರ್ಗೆ, ನಾಳೆ ಭೂಪೇಶ್ ಬಾಘೆಲ್  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಂತರ ಸಂಪುಟ ರಚನೆ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.