ತಮಿಳುನಾಡು, ಆಂಧ್ರ ಕರಾವಳಿಯಲ್ಲಿ ಮತ್ತೆ ಚಂಡಮಾರುತ, ಭಾರಿ ಮಳೆ ಸಾಧ್ಯತೆ!
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪೆಥೈ ಚಂಡಮಾರುತ ಸೃಷ್ಟಿಯಾಗಿದ್ದು, ಉಭಯ ರಾಜ್ಯಗಳ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Published On :
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಪೆಥೈ ಚಂಡಮಾರುತ ಸೃಷ್ಟಿಯಾಗಿದ್ದು, ಉಭಯ ರಾಜ್ಯಗಳ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪೆಥೈ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಕರಾವಳಿ ಮತ್ತು ತಮಿಳುನಾಡಿನ ಉತ್ತರ ಭಾಗದಲ್ಲಿ ಭಾನುವಾರ, ಸೋಮವಾರ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾನುವಾರ ಮತ್ತು ಸೋಮವಾರ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆಯಿದೆ. ಉತ್ತರ ತಮಿಳುನಾಡಿನಲ್ಲಿ ಭಾನುವಾರ ಭಾರಿ ಮಳೆಯಾಗಲಿದೆ. ಆಂಧ್ರಪ್ರದೇಶ, ಉತ್ತರ ತಮಿಳುನಾಡು ಮತ್ತು ಪುದುಚೆರಿ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 45-65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಈ ವೇಗ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ತಮಿಳುನಾಡಿನ ರಾಜಧಾನಿ ಚೆನ್ನೈ, ಪುದುಚೇರಿ. ಆಂಧ್ರ ಪ್ರದೇಶದ ಮಚಲೀ ಪಟ್ಟಣಂ, ಕಾಕಿನಾಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಉಪ ನಿರ್ದೇಶಕ ಎಸ್ ಬಾಲಚಂದ್ರನ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಂಧ್ರ ಪ್ರದೇಶಚೆನ್ನೈಪುದುಚೇರಿIMDTamil Nadu weatherTamil Nadu weather warningPuducherry weatherCyclone Phethaiಪೆಥೈ ಚಂಡಮಾರುತತಮಿಳುನಾಡು ಹವಾಮಾನ ಇಲಾಖೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


