ಸಜ್ಜನ್ ಕುಮಾರ್ ಶಿಕ್ಷೆಗೆ ಸ್ವಾಗತ, ಆದರೆ ಸಿಖ್ ಹತ್ಯಾಕಾಂಡದಲ್ಲಿ ಕಾಂಗ್ರೆಸ್ ಕೈವಾಡವಿಲ್ಲ: ಅಮರಿಂದರ್ ಸಿಂಗ್
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಶಿಕ್ಷೆ ವಿಧಿಸಿರುವುದನ್ನು ಕಾಂಗ್ರೆಸ್ ನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.

Published On :
ಪಂಜಾಬ್: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ಬಳಿಕ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಗೆ ಶಿಕ್ಷೆ ವಿಧಿಸಿರುವುದನ್ನು ಕಾಂಗ್ರೆಸ್ ನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸ್ವಾಗತಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿಗಳ ಕಚೇರಿಯಿಂದ ಬಿಡುಗಡೆ ಮಾಡಲಾದ ಪತ್ರದಲ್ಲಿ ಸಜ್ಜನ್ ಕುಮಾರ್ ದೋಷಿ ಎಂದು ಸಾಬೀತಾಗಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮರಿಂದರ್ ಸಿಂಗ್, ತೀರ್ಪನ್ನು ಸ್ವಾಗತಿಸುತ್ತೇವೆ ಆದರೆ ಇಂದಿರಾ ಗಾಂಧಿ ಹತ್ಯೆಯ ನಂತರ ನಡೆದ ಸಿಖ್ ವಿರೊಧಿ ದಂಗೆಯಲ್ಲಿ ಕಾಂಗ್ರೆಸ್ ನ ಕೈವಾಡವಿರಲಿಲ್ಲ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ಸಿಖ್ ವಿರೋಧಿ ದಂಗೆಯಲ್ಲಿ ಕಾಂಗ್ರೆಸ್ ನದ್ದಾಗಲಿ ಅಥವಾ ಗಾಂಧಿ ಕುಟುಂಬದ್ದಾಗಲೀ ಪಾತ್ರವಿರಲಿಲ್ಲ. ಆದರೆ ಬಿಜೆಪಿ ಹಾಗೂ ಶಿರೋಮಣಿ ಅಖಾಲಿದಳದವರು ಗಾಂಧಿ ಕುಟುಂಬದ ಹೆಸರನ್ನು ಎಳೆದು ತಂದು ರಾಜಕೀಯ ಮಾಡುತ್ತಿದ್ದಾರೆ ಎಂದು ಅಮರಿಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


