ಛತ್ತೀಸ್ ಗಢ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೆಲ್ ಪ್ರಮಾಣ
ಛತ್ತೀಸ್ ಗಢ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಘೆಲ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

Published On :
ಛತ್ತೀಸ್ ಗಢ: ಛತ್ತೀಸ್ ಗಢ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಘೆಲ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಇಂದು ಬಲ್ಬಿರ್ ಸಿಂಗ್ ಜುನೇಜಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರು ಬಘೆಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಭೂಪೇಶ್ ಬಘೆಲ್ ಅವರೊಂದಿಗೆ ಟಿಎಸ್ ಸಿಂಗ್ ಡಿಯೊ, ತಮರಾಧ್ವಾಜ್ ಸಾಹು ಹಾಗೂ ಚರಣ್ ದಾಸ್ ಮೆಹಂತ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕಳೆದ ನವೆಂಬರ್ ನಲ್ಲಿ ನಡೆದ ಛತ್ತೀಸ್ ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ 15 ವರ್ಷಗಳ ಬಿಜೆಪಿ ಆಡಳಿತಕ್ಕೆ ಅಂತ್ಯ ಹಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


