1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ, ಜೀವಾವಧಿ ಶಿಕ್ಷೆ
1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು,...

Published On :
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪ್ರಕರಣದ ಪ್ರಮುಖ ಆರೋಪಿ ಮತ್ತು ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿದೆ.
ಅಂತೆಯೇ ಪ್ರಕರಣದ ಶಿಕ್ಷೆ ಪ್ರಮಾಣವನ್ನೂ ಕೂಡ ದೆಹಲಿ ಕೋರ್ಟ್ ಇಂದೇ ನೀಡಿದ್ದು, ದೋಷಿ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್ ಮುರಳೀಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಅಂತೆಯೇ ಡಿಸೆಂಬರ್ 31ರ ಒಳಗೆ ಸಜ್ಜನ್ ಕುಮಾರ್ ಶರಣಾಗಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.
1947ರಲ್ಲಿ ದೇಶ ವಿಭಜನೆ ವೇಳೆ ನಡೆದಿದ್ದ ಭೀಕರ ಹಿಂಸಾಚಾರ ಆ ನಂತರ 37 ವರ್ಷಗಳ ಪುನರಾವರ್ತನೆಯಾಗಿತ್ತು. ಇಂದಿರಾಗಾಂಧಿ ಹತ್ಯೆಗೆ ಪ್ರತೀಕಾರವಾಗಿ ರಾಜಕೀಯ ಪ್ರೇರಿತ ಹಿಂಸಾಚಾರ ಭುಗಿಲೆದ್ದಿತ್ತು. ಇದು 1947ರ ಹಿಂಸಾಚಾರವನ್ನು ನೆನಪಿಸುವಂತಿತ್ತು ಎಂದು ನ್ಯಾಯಮೂರ್ತಿಗಳು ಹಿಂಸಾಚಾರವನ್ನು ಖಂಡಿಸಿದ್ದಾರೆ. ಅಲ್ಲದೆ ದೋಷಿ ಸಜ್ಜನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೋರ್ಟ್ ಪ್ರಕರಣದ ಅಪರಾಧ ತನ್ನ ರಾಜಕೀಯ ವರ್ಚಸ್ಸು ಬಳಿಸಿಕೊಂಡು ವಿಚಾರಣೆಗೆ ಗೈರಾಗುತ್ತಿದ್ದರು. ಅಲ್ಲದೆ ರಾಜಕೀವಾಗಿ ಹಲವು ಸವಲತ್ತುಗಳನ್ನು ಪಡೆಯುತ್ತಿದ್ದರು ಎಂದು ಕೋರ್ಟ್ ಕಿಡಿಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiDelhi High Courtದೆಹಲಿ ಹೈಕೋರ್ಟ್1984 Anti-Sikh RiotsSajjan Kumarಸಜ್ಜನ್ ಕುಮಾರ್1984 ಸಿಖ್ ವಿರೋಧಿ ದಂಗೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


