ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್ ಕುಮಾರ್ ರಾಜೀನಾಮೆ: ರಾಹುಲ್ ಗೆ ಪತ್ರ
1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Published On :
ನವದೆಹಲಿ: 1984 ರ ಸಿಖ್ ವಿರೋಧಿ ಹತ್ಯಾಕಾಂಡದ ಅಪರಾಧಿ ಸಜ್ಜನ್ ಕುಮಾರ್ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಸಜ್ಜನ್ ಕುಮಾರ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. "ನನ್ನ ವಿರುದ್ಧ ದೆಹಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ನಾನು ಈ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ" ಎಂದು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ಸಜ್ಜನ್ ಕುಮಾರ್ ತಿಳಿಸಿದ್ದಾರೆ.
ಇಂದಿರಾ ಗಾಂಧಿ ಹತ್ಯೆಯ ನಂತರ 1984 ರಲ್ಲಿ ಸಿಖ್ ವಿರೋಧಿ ದಂಗೆಯಲ್ಲಿ ಸಜ್ಜನ್ ಕುಮಾರ್ ಪಾತ್ರ ಸಾಬೀತಾಗಿದ್ದರಿಂದ, ಪ್ರಕರಣದಲ್ಲಿ ಆತ ದೋಷಿ ಎಂದು ದೆಹಲಿ ಹೈಕೋರ್ಟ್ ಡಿ.17 ರಂದು ತೀರ್ಪು ಪ್ರಕಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Rahul Gandhiರಾಹುಲ್ ಗಾಂಧಿSajjan Kumarಸಜ್ಜನ್ ಕುಮಾರ್1984 anti-Sikh riot1984 ರ ಸಿಖ್ ವಿರೋಧಿ ದಂಗೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


