ದೇಶ

ಮಧ್ಯಪ್ರದೇಶ: ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಮುತ್ಸದ್ದಿ ನಡೆಗೆ ಮೆಚ್ಚುಗೆಯ ಮಹಾಪೂರ

ಮಧ್ಯಪ್ರದೇಶದಲ್ಲಿ ಅಧಿಕಾರದಿಂದ ನಿರ್ಗಮಿಸಿರುವ ಶಿವರಾಜ್ ಸಿಂಗ್ ಚೌಹಾಣ್ ಹಲವು ಕಾರಣಗಳಿಗೆ ಕಳೆದ ಒಂದು ವಾರದಲ್ಲಿ ಮೆಚ್ಚುಗೆಗೆಗೆ ಪಾತ್ರರಾಗುತ್ತಿದ್ದಾರೆ.

ಮಧ್ಯಪ್ರದೇಶ: ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಮುತ್ಸದ್ದಿ ನಡೆಗೆ ಮೆಚ್ಚುಗೆಯ ಮಹಾಪೂರ
ಮಧ್ಯಪ್ರದೇಶ: ನಿರ್ಗಮಿತ ಸಿಎಂ ಶಿವರಾಜ್ ಸಿಂಗ್ ಮುತ್ಸದ್ದಿ ನಡೆಗೆ ಮೆಚ್ಚುಗೆಯ ಮಹಾಪೂರ
Published On :
ಭೋಪಾಲ್: ಮಧ್ಯಪ್ರದೇಶದಲ್ಲಿ ಅಧಿಕಾರದಿಂದ ನಿರ್ಗಮಿಸಿರುವ ಶಿವರಾಜ್ ಸಿಂಗ್ ಚೌಹಾಣ್ ಹಲವು ಕಾರಣಗಳಿಗೆ ಕಳೆದ ಒಂದು ವಾರದಲ್ಲಿ ಮೆಚ್ಚುಗೆಗೆಗೆ ಪಾತ್ರರಾಗುತ್ತಿದ್ದಾರೆ. 
ಅಧಿಕಾರದಿಂದ ನಿರ್ಗಮಿಸುವಾಗಿನ ತಮ್ಮ ಸರಳತೆಗೆ ಈ ವರೆಗೂ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ತಮ್ಮ ಮುತ್ಸದ್ದಿತನದ ನಡೆಗೆ ಶಿವರಾಜ್ ಸಿಂಗ್ ಚೌಹಾಣ್ ಎಲ್ಲರ ಮನಸ್ಸುಗಳನ್ನು ಗೆದ್ದಿದ್ದಾರೆ. ಮುಖ್ಯಮಂತ್ರಿಗಳ ಪದಗ್ರಹಣ ಸಮಾರಂಭದಲ್ಲಿ ವಿಪಕ್ಷ ನಾಯಕರು  ಉಪಸ್ಥಿತರಿದ್ದರೆ, ವೇದಿಕೆ ಹಂಚಿಕೊಳ್ಳುವುದು ತೀರಾ ವಿರಳ. ಆದರೆ ಈ ಸಂಪ್ರದಾಯವನ್ನು ಬದಿಗೊತ್ತಿರುವ ಶಿವರಾಜ್ ಸಿಂಗ್ ಚೌಹಾಣ್, ಮಧ್ಯಪ್ರದೇಶ ನೂತನ ಸಿಎಂ ಕಮಲ್ ನಾಥ್ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೂ ಅಲ್ಲದೇ ವೇದಿಕೆ ಹಂಚಿಕೊಂಡು ಸಿಎಂ ಕಮಲ್ ನಾಥ್ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರ ಕೈ ಹಿಡಿದು ಸಾರ್ವಜನಿಕರತ್ತ ಕೈ ಬೀಸಿ ಮುತ್ಸದ್ದಿ ತನ ಮೆರೆದಿದ್ದಾರೆ. 
ಶಿವರಾಜ್ ಸಿಂಗ್ ಚೌಹಾಣ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ರಾಜಕೀಯ ಗಣ್ಯರು, ಪತ್ರಕರ್ತರೂ ಶಿವರಾಜ್ ಸಿಂಗ್ ಚೌಹಾಣ್ ಮುತ್ಸದ್ದಿತನವನ್ನು ಕೊಂಡಾಡುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.