ಮೋದಿ ಬದಲು ದೇಶಕ್ಕೆ ನಿತಿನ್ ಗಡ್ಕರಿ ಪ್ರಧಾನಿಯಾಗಲಿ: ಆರ್ ಎಸ್ ಎಸ್ ಗೆ ರೈತ ನಾಯಕ ಒತ್ತಾಯ
ನರೇಂದ್ರ ಮೋದಿ ಅವರ ಬದಲಿಗೆ ದೇಶದ ಪ್ರಧಾನಿಯನ್ನಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ಮಹಾರಾಷ್ಟ್ರದ ಪ್ರಮುಖ ರೈತ ...

Published On :
ಮುಂಬಯಿ: ನರೇಂದ್ರ ಮೋದಿ ಅವರ ಬದಲಿಗೆ ದೇಶದ ಪ್ರಧಾನಿಯನ್ನಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನೇಮಿಸಬೇಕೆಂದು ಮಹಾರಾಷ್ಟ್ರದ ಪ್ರಮುಖ ರೈತ ನಾಯಕರೊಬ್ಬರು ಆರ್ ಎಸ್ ಎಸ್ ಗೆ ಒತ್ತಾಯಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೇ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ವಸಂತ್ರೋ ನಾಯಕ್ ಶ್ವೇಟಿ ಸ್ವಾವಲಂಬನ ಮಿಷನ್ ಅಧ್ಯಕ್ಷ ಕಿಶೋರ್ ತಿವಾರಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಗಳಿಗೆ ಶಂಕು ಸ್ಥಾಪನೆ ನೇರವೇರಿಸಿದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ.
ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹಾಗೂ ಪ್ರಧಾನ ಕಾರ್ಯದರ್ಶಿ ಬೈಯ್ಯಾಜಿ ಸುರೇಶ್ ಜೋಶಿ ಅವರಿಗೆ ಪತ್ರ ಬರೆದಿದ್ದಾರೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ, ಚತ್ತೀಸ್ ಗಡ ಮತ್ತು ರಾಜಸ್ತಾನಗಳ ಫಲಿತಾಂಶ ನೋಡಿದರೇ ಅಹಂಕಾರ ಪಡುತ್ತಿದ್ದ ನಾಯಕರು ಸೋತಿದ್ದಾರೆ, ಹೀಗಾಗಿ ಮೋದಿ ಅವರ ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ.
ಮೋದಿ ಮತ್ತು ಅಮಿತ್ ಶಾ ರೈತ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದ್ದಾರೆ, ಇದೇ ಬಿಜೆಪಿ ಸೋಲಲು ಕಾರಣವಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿPrime MinisterNitin Gadkariನಿತಿನ್ ಗಡ್ಕರಿಪ್ರಧಾನ ಮಂತ್ರಿMaharashtra leaderಮಹಾರಾಷ್ಟ್ರ ನಾಯಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


