ಗುಜರಾತ್, ಮುಜಾಫರ್ ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೇಜ್ರಿವಾಲ್
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ....

Published On :
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅದೇ ರೀತಿ ಗುಜರಾತ್, ಮುಜಾಫರ್ ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.
ಇಂದು ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ದೆಹಲಿ ಸಿಎಂ, ಸಜ್ಜನ್ ಕುಮಾರ್ ಗೆ ಶಿಕ್ಷೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಸಿಖ್ ಹತ್ಯಾಕಾಂಡದ ಹಾಗೆಯೇ ಗುಜರಾತ್ ಗಲಭೆ ಮತ್ತು ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿರುವ ದೊಡ್ಡ ದೊಡ್ಡ ನಾಯಕರಿಗೂ ಜೀವಾವಧಿ ಶಿಕ್ಷೆಯಾಗಲಿ. ಇದಕ್ಕೆ ನ್ಯಾಯಾಂಗ ಮುಂದಾಗಬೇಕು ಎಂದಿದ್ದಾರೆ.
34 ವರ್ಷಗಳ ಬಳಿಕ ಸಿಖ್ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ. ಈ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದೇ ರೀತಿಯಲ್ಲಿ 2002 ರಲ್ಲಿ ಗುಜರಾತ್ ಗಲಭೆ, 2013 ರಲ್ಲಿ ಮಜಾಫರ್ ನಗರ ಗಲಭೆ ನಡೆಸಿದ ದೊಡ್ಡ ನಾಯಕರಿಗೂ ಶಿಕ್ಷೆಯಾಗಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


